ಕರ್ನಾಟಕ

ಮತ್ತೆ ‘ಆಜಾದಿ’ ಘೋಷಣೆ ಮಾಡಿದ ‘ಪೌರತ್ವ’ ಪ್ರತಿಭಟನಾಕಾರರು

Pinterest LinkedIn Tumblr


ಬೆಂಗಳೂರು: ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ ಪ್ರತಿಭಟನಾಕಾರರು ‘ಆಜಾದಿ’ ಭಿತ್ತಿಪತ್ರಗಳನ್ನು ಪ್ರದರ್ಶಿಸುವ ಮೂಲಕ ಮತ್ತೆ ವಿವಾದ ಸೃಷ್ಟಿಸಿದ್ದಾರೆ.

ಬೆಂಗಳೂರಿನ ಟೌನ್ ಹಾಲ್ ಎದುರು ಗುರುವಾರ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಜನತೆ ಪೌರತ್ವ ಕಾಯಿದೆ ವಿರುದ್ಧ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ನಮಗೆ ನ್ಯಾಯ ಬೇಕು, ನಮಗೆ ನ್ಯಾಯ ಬೇಕು ಎಂದು ಘೋಷಣೆ ಕೂಗುತ್ತಿದ್ದ ಒಂದು ಗುಂಪು ಆಜಾದಿ (AAZADI) ಅಕ್ಷರಗಳುಳ್ಳ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿದರು.

ಆಜಾದಿ ಎಂಬ ಪದ ‘ಸ್ವಾಯತ್ತತೆ ಅಥವಾ ಸ್ವಾತಂತ್ರ್ಯ ಎಂಬ ಅರ್ಥ ನೀಡುತ್ತದೆ. ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಸ್ವಾಯತ್ತತೆಯ ಬೇಡಿಕೆ ಇಡುವುದು ಗಣತಂತ್ರ ವ್ಯವಸ್ಥೆಗೆ ಧಕ್ಕೆಯಾದಂತೆ. ಈ ರೀತಿಯ ಘೋಷಣೆಗಳನ್ನು ದೇಶವಿರೋಧಿ ಘೋಷಣೆಗಳೆಂದು ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಆಜಾದಿ ಬಿತ್ತಿ ಪತ್ರ ಪ್ರದರ್ಸಿದ ಪ್ರತಿಭಟನಾಕಾರರು ವಿವಾದಕ್ಕೆ ಒಳಗಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಸ್ವಾಯತ್ತ ಸ್ಥಾನಮಾನ ರದ್ದಾದ ಸಂದರ್ಭದಲ್ಲಿ ‘ಆಜಾದಿ’ ಘೋಷಣೆ ಹೆಚ್ಚು ಚಾಲ್ತಿಯಲ್ಲಿತ್ತು. ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದಲ್ಲಿ ಆಗಾಗ್ಗೆ ‘ಆಜಾದಿ’ ಘೋಷಣೆ ಕುರಿತಂತೆ ಸುದ್ದಿಯಾಗುತ್ತಲೇ ಇರುತ್ತದೆ.

Comments are closed.