ಕರ್ನಾಟಕ

ಪೇಜಾವರ ಶ್ರೀ ಆರೋಗ್ಯ ವಿಚಾರಿಸಿದ ಮೋದಿ

Pinterest LinkedIn Tumblr


ಮಣಿಪಾಲ: ಉಡುಪಿ ಅಷ್ಟಮಠದ ಹಿರಿಯ ಸ್ವಾಮೀಜಿಗಳಾದ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಳಿಗ್ಗೆ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿ ಶ್ರೀಗಳ ಆಪ್ತ ಕಾರ್ಯದರ್ಶಿ ಟಿ ಪಿ ಅನಂತ್ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ಶ್ರೀಗಳ ಆರೋಗ್ಯ ವಿಚಾರಿಸಲು ಶನಿವಾರ ಉಡುಪಿಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕೂಡಾ ಶನಿವಾರ ಸಂಜೆ ಉಡುಪಿ- ಮಣಿಪಾಲಕ್ಕೆ ಭೇಟಿ ನೀಡಲಿದ್ದಾರೆ

Comments are closed.