ಕರ್ನಾಟಕ

ಇದು ಸರ್ಕಾರಿ ಪ್ರಾಯೋಜಿತ ಗಲಭೆ; ಯಡಿಯೂರಪ್ಪ ಹೆಸರಿಗೆ ಕಳಂಕ ತರುವ ಯತ್ನ: ಖಾದರ್

Pinterest LinkedIn Tumblr


ಬೆಂಗಳೂರು: ಮಂಗಳೂರು ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ ಗಲಾಟೆಯಾಗಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಹೆಸರಿಗೆ ಕಳಂಕ ತರಲು ಈ ಗಲಭೆ ಮಾಡಲಾಗಿದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಮಾಜಿ ಸಚಿವ ಖಾದರ್, ದೇಶದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳಿಗೆ ಬಿಜೆಪಿಯೇ ನೇರ ಹೊಣೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬಿಜೆಪಿ ತನ್ನ ವೋಟ್ ಬ್ಯಾಂಕ್ ಗಾಗಿ ಉಪಯೋಗಿಸುತ್ತಿದೆ ಎಂದು ಆರೋಪಿದರು.

ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ. ಅದಲ್ಲದೆ ಸುಮ್ಮನೆ ಕಾಂಗ್ರೆಸ್ ಮೇಲೆ ಆರೋಪ ಮಾಡಬೇಡಿ ಎಂದ ಖಾದರ್, ಮಂಗಳೂರು ಗಲಭೆಯಲ್ಲಿ ಕಾಂಗ್ರೆಸ್ ಕೈವಾಡವಿಲ್ಲ ಎಂದರು.

Comments are closed.