ಕರ್ನಾಟಕ

ಬಿಜೆಪಿ ಮುಕ್ತ ಭಾರತಕ್ಕಾಗಿ ಜನರು ಕಾಯುತ್ತಿದ್ದಾರೆ: ಸಿದ್ದರಾಮಯ್ಯ

Pinterest LinkedIn Tumblr


ಬೆಂಗಳೂರು: ಒಂದರ ಹಿಂದೆ ಒಂದರಂತೆ ಹಲವು ರಾಜ್ಯಗಳು ಬಿಜೆಪಿಯನ್ನು ತಿರಸ್ಕರಿಸುತ್ತಿದೆ. ಹೀಗಾಗಿಯೇ ಜಾರ್ಖಾಂಡ್ ಜನತೆ ಬಿಜೆಪಿ ಕೈಬಿಟ್ಟು, ಜೆಎಂಎಂ ಮೈತ್ರಿಕೂಟದ ಆಯ್ಕೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮಧ್ಯಪ್ರದೇಶ, ರಾಜಸ್ಥಾನ, ಪಂಜಾಬ್ ಹಾಗೂ ಮಹಾರಾಷ್ಟ್ರ ರಾಜ್ಯಗಳ ಚುನಾವಣಾ ಫಲಿತಾಂಶ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರದಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ದೇಶ ಕಾಂಗ್ರೆಸ್ ಮುಕ್ತವಾಗಬೇಕೆಂದು ಬಯಸಿದ್ದಾರೆ. ಆದರೆ, ಜನರು ಬಿಜೆಪಿ ಮುಕ್ತ ಭಾರತಕ್ಕಾಗಿ ಕಾಯುತ್ತಿದ್ದಾರೆಂದು ಹೇಳಿದ್ದಾರೆ.

ಕೇವಲ ಈ ರಾಜ್ಯಗಳಷ್ಟೇ ಅಲ್ಲ, ಕರ್ನಾಟಕ ಜನತೆ ಕೂಡ ಬಿಜೆಪಿಯನ್ನು ತಿರಸ್ಕರಿಸಿದ್ದರು. 2018ರ ವಿಧಾನಸಭಾ ಚುನಾವಮೆಯಲ್ಲಿ ಬಿಜೆಪಿ ಬಹುಮತವನ್ನು ಪಡೆದಿರಲಿಲ್ಲ. ಆದರೆ, ಪಕ್ಷ ಶಾಸಕರನ್ನು ಖರೀದಿ ಮಾಡುವ ಮೂಲಕ ಹಿಂಬಾಗಿಲಿಂದ ಅಧಿಕಾರಕ್ಕೆ ಬಂದಿದೆ ಎಂದು ಆರೋಪಿಸಿದ್ದಾರೆ.

ಇದರಂತೆ ಕಾಂಗ್ರೆಸ್ ಹಿರಿಯ ದಿನೇಶ್ ಗುಂಡೂರಾವ್ ಕೂಡ ಮಾತನಾಡಿ, ಜಾರ್ಖಾಂಡ್ ಫಲಿತಾಂಶ ಜನರ ನೈತಿಕ ಸ್ಥೈರ್ಯವನ್ನು ಹೆಚ್ಚಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಜಾರ್ಖಾಂಡ್ ಕಾಂಗ್ರೆಸ್ ಪಕ್ಷಕ್ಕೆ ಶುಭಾಶಯಗಳನ್ನು ಕೋರುತ್ತೇನೆ. ಇದೊಂದು ಅದ್ಭುತ ಫಲಿತಾಂಶ. ದೇಶದ ಜನತೆಗೆ ಫಲಿತಾಂಶ ನೈತಿಕ ಸ್ಥೈರ್ಯವನ್ನು ಹೆಚ್ಚಿದೆ. ಪೌರತ್ವ ಕಾಯ್ದೆ ಹಾಗೂ ಎನ್ಆರ್’ಸಿ ವಿರುದ್ಧ ರಾಷ್ಟ್ರಾದ್ಯಂತ ಪ್ರತಿಭಟನೆ ಮುಂದುವರೆಸುತ್ತೇವೆಂದು ತಿಳಿಸಿದ್ದಾರೆ.

Comments are closed.