ಕರ್ನಾಟಕ

ಜಿಂದಾಲ್ ಉಕ್ಕಿನ ಕಾರ್ಖಾನೆಯಲ್ಲಿ ‘ಕೆಜಿಎಫ್ ಭಾಗ-2’ ಚಿತ್ರೀಕರಣ

Pinterest LinkedIn Tumblr


ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಜಿಂದಾಲ್ ಉಕ್ಕಿನ ಕಾರ್ಖಾನೆಯಲ್ಲಿ ‘ಕೆಜಿಎಫ್ ಭಾಗ-2’ ಸಿನಿಮಾ ಚಿತ್ರೀಕರಣ ಭರದಿಂದ ಸಾಗಿದೆ.

ಕಳೆದ 2 ದಿನಗಳಿಂದ ತುಂಗಾ ಮೈನ್ಸ್ ವ್ಯಾಪ್ತಿಯಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಚಿತ್ರತಂಡದ ನೂರಾರು ಕಲಾವಿದರು ಈಗಾಗಲೇ ಚಿತ್ರೀಕರಣದಲ್ಲಿ ಭಾಗಿಯಾಗಿದ್ದು, ಚಿತ್ರೀಕರಣಕ್ಕೆ ಅದ್ಧೂರಿಯಾಗಿ ಸೆಟ್ ಹಾಕಲಾಗಿದೆ. ಶೂಟಿಂಗ್‍ನ ವಿಡಿಯೋ ತುಣುಕೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಅನೇಕ ವಾಹನಗಳು ಸಾಲಾಗಿ ಬರುತ್ತಿದ್ದು, ನೂರಾರು ಮಂದಿ ಚಿತ್ರೀಕರಣದಲ್ಲಿ ಇರುವುದನ್ನು ಕಾಣಬಹುದು. ನಟ ಯಶ್ ಡಿಸೆಂಬರ್ 26 ರಂದು ಶೂಟಿಂಗ್‍ನಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಅಭಿಮಾನಿಗಳು ಯಶ್ ಅವರನ್ನು ನೋಡಲು ಕಾತುರದಿಂದ ಕಾಯುತ್ತಿದ್ದಾರೆ.

ಸದ್ಯಕ್ಕೆ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಇತ್ತೀಚೆಗಷ್ಟೆ ‘ಕೆಜಿಎಫ್-2’ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಹೊಂಬಾಳೆ ಫಿಲ್ಮ್ ಬ್ಯಾನರ್ ಅಡಿಯಲ್ಲಿ ಪ್ರಶಾಂತ್ ನೀಲ್ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ.

Comments are closed.