
ರಾಯಚೂರು: ಮಂಗಳೂರಿನಲ್ಲಿ ಜರುಗಿದ ಗೋಲಿಬಾರ್‌ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತನಿಖೆ ವರದಿ ಕೈಸೇರುವವರೆಗೆ ಮೃತರ ಕುಟುಂಬಗಳಿಗೆ ಪರಿಹಾರ ನೀಡುವುದಿಲ್ಲ ಎಂದು ಹೇಳಿಕೆ ನೀಡಿದ ಬೆನ್ನಲ್ಲಿಯೇ ಸಚಿವ ಬಿ.ಶ್ರೀರಾಮುಲು ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎನ್ನುವ ಹೇಳಿಕೆ ನೀಡುವ ಮೂಲಕ ಆಶ್ಚರ್ಯ ಮೂಡಿಸಿದ್ದಾರೆ.
ನಗರದ ಬಿಜೆಪಿ ಮುಖಂಡರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿ, ಪ್ರಕರಣ ಕುರಿತು ನ್ಯಾಯಾಂಗ ತನಿಖೆಯಾದಾಗ ಮಾತ್ರ ಸತ್ಯಾಂಶ ಹೊರಬರಲಿದ್ದು, ಈ ಬಗ್ಗೆ ಇನ್ನೂ ಪರಿಶೀಲನೆಯಲ್ಲಿದೆ. ಗಲಭೆ ಪೂರ್ವ ನಿಯೋಜಿತವಾಗಿದ್ದು, ಘಟನೆ ಹಿಂದೆ ಕಾಂಗ್ರೆಸ್ ಕೈವಾಡವಿರುವುದು ಸ್ಪಷ್ಟವಾಗಿದೆ ಎಂದರು.
ನನಗೆ ಡಿಸಿಎಂ ಹುದ್ದೆ ನೀಡಬೇಕು ಎನ್ನುವುದು ಜನರ ಅಭಿಲಾಷೆ. ಈ ಬಗ್ಗೆ ಪಕ್ಷದ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಲಾಗಿದೆ. ಹರಕೆ ತೀರಿಸಲು ಮಂತ್ರಾಲಯಕ್ಕೆ ಭೇಟಿ ನೀಡಿದ್ದೇನೆ ಹೊರತು ಅದಕ್ಕೂ ಡಿಸಿಎಂ ಹುದ್ದೆಗೂ ಸಂಬಂಧವಿಲ್ಲ. ಆಯುಷ್ಮಾನ್ ಭಾರತ್ ಕಾರ್ಡ್ ಮಾಡಿ ಕೊಡಲು ಸಾರ್ವಜನಿಕರಿಂದ ಹೆಚ್ಚಿನ ಹಣ ವಸೂಲಿ ಮಾಡಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತಿದ್ದು, ಜನರಿಗೆ ಯಾವುದೇ ಅನಾನುಕೂಲವಾಗದಂತೆ ಕ್ರಮಕೈಗೊಳ್ಳಲಾಗುವುದು ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಎನ್.ಶಂಕ್ರಪ್ಪ, ರಾಜಕುಮಾರ, ಚೇತನ ರೆಡ್ಡಿ, ಮುಕ್ತಿಯಾರ್ ಹಾಗೂ ಇತರರಿದ್ದರು.
Comments are closed.