ಕರ್ನಾಟಕ

ರಾಜ್ಯಕ್ಕೆ 50 ಸಾವಿರ ಕೋಟಿ ವಿಶೇಷ ಅನುದಾನ ಕೊಡಿ: ಮೋದಿಗೆ ಯಡಿಯೂರಪ್ಪ ಮನವಿ

Pinterest LinkedIn Tumblr


ತುಮಕೂರು: ಪ್ರಗತಿಪರ ರೈತರಿಗೆ ಪ್ರಶಸ್ತಿ ನೀಡಲು ಕರ್ನಾಟಕ ರಾಜ್ಯವನ್ನು ಆಯ್ಕೆ ಮಾಡಿದ್ದು ಹೆಮ್ಮೆಯ ವಿಚಾರವಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.

ಗುರುವಾರ ತುಮಕೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರಗತಿಪರ ರೈತರಿಗೆ ರಾಷ್ಟ್ರ ಮಟ್ಟದ ಕೃಷಿ ಸಮ್ಮಾನ್ ಯೋಜನೆ ಅನುಷ್ಠಾನ ಹಾಗೂ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಿಎಸ್ ವೈ ಮಾತನಾಡಿದರು.

2022ರೊಳಗೆ ರಾಜ್ಯದಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ಗುರಿ ಹೊಂದಲಾಗಿದೆ. ಅದೇ ರೀತಿ ನದಿ ಜೋಡಣೆಯಂತಹ ಯೋಜನೆಯನ್ನು ಜಾರಿಗೊಳಿಸಬೇಕು. ನೀರಾವರಿ ಯೋಜನೆ ಪೂರ್ಣಗೊಳಿಸಲು ಸಹಕಾರ ನೀಡಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು.

ಕಳೆದ ಭೀಕರ ಮಳೆ, ಪ್ರವಾಹದಿಂದ ರಾಜ್ಯದಲ್ಲಿ 30 ಸಾವಿರ ಕೋಟಿಗೂ ಹೆಚ್ಚು ನಷ್ಟ ಉಂಟಾಗಿದೆ. ಈ ಬಗ್ಗೆ ಹಲವು ಬಾರಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದೇನೆ. ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ 50 ಸಾವಿರ ಕೋಟಿ ರೂಪಾಯಿ ವಿಶೇಷ ಅನುದಾನ ನೀಡಬೇಕೆಂದು ಮನವಿ ಮಾಡಿಕೊಂಡರು.

Comments are closed.