ಕರ್ನಾಟಕ

ಬೈಕ್​ನಲ್ಲಿ ಹೋಗುತ್ತಿದ್ದ ವೇಳೆ ಆ್ಯಸಿಡ್ ದಾಳಿ ನಡೆಸಿದ ದುಷ್ಕರ್ಮಿಗಳು ; ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು

Pinterest LinkedIn Tumblr

ಆನೇಕಲ್: ಬೆಂಗಳೂರಿನ ಚಂದಾಪುರದಲ್ಲಿ ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಆ್ಯಸಿಡ್ ಎರಚಲಾಗಿತ್ತು. ಆ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಆ್ಯಸಿಡ್ ದಾಳಿಗೆ ಒಳಗಾದ ವ್ಯಕ್ತಿಯನ್ನು ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಹೆನ್ನಾಗರ ಬಿ ಹೊಸಹಳ್ಳಿ ನಿವಾಸಿ ಜ್ಯೋತಪ್ಪ (50) ಎಂದು ಗುರುತಿಸಲಾಗಿದೆ. ಜ್ಯೋತಪ್ಪ ಶುಕ್ರವಾರ ರಾತ್ರಿ ಬೈಕ್​ನಲ್ಲಿ ಹೋಗುತ್ತಿದ್ದ ವೇಳೆ ಅಡ್ಡಗಟ್ಟಿ ದಾಳಿ ನಡೆಸಿದ ಇಬ್ಬರು ದುಷ್ಕರ್ಮಿಗಳು ಆ್ಯಸಿಡ್ ಎರಚಿದ್ದರು. ನೋವಿನಿಂದ ಸಹಾಯಕ್ಕಾಗಿ ಕಿರುಚಾಡುತ್ತಿದ್ದ ವೇಳೆ ದಾರಿಹೋಕರು ಜ್ಯೋತಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ಆ್ಯಸಿಡ್ ದಾಳಿಗೊಳಗಾಗಿದ್ದ ವ್ಯಕ್ತಿ ಇಂದು ಸಾವನ್ನಪ್ಪಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಜ್ಯೋತಪ್ಪ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಹೊಸಹಳ್ಳಿ ಬಳಿ ಆ್ಯಸಿಡ್ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿತ್ತು. ನಂತರ ದುಷ್ಕರ್ಮಿಗಳು ಬೈಕ್​ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದರು. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.