ಕರ್ನಾಟಕ

ಪ್ರಧಾನಿ ನರೇಂದ್ರ ಮೋದಿ ಜೊತೆ ಪರೀಕ್ಷಾ ಪೇ ಚರ್ಚೆಗೆ ಆನೇಕಲ್ ವಿದ್ಯಾರ್ಥಿನಿ ಆಯ್ಕೆ

Pinterest LinkedIn Tumblr


ಬೆಂಗಳೂರು: ಆನೇಕಲ್ ತಾಲೂಕಿನ ಹೆಬ್ಬಗೋಡಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಭಾವನಾ ಜನವರಿ 20ರಂದು ದೆಹಲಿಯಲ್ಲಿ ನಡೆಯಲಿರುವ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಭಾಗವಹಿಸಲು ಆಯ್ಕೆಯಾಗಿದ್ದಾಳೆ.

ಬೆಂಗಳೂರು ನಗರ ಜಿಲ್ಲೆಯಿಂದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಈ ಪೈಕಿ ಆನೇಕಲ್ ತಾಲೂಕಿನ ಹೆಬ್ಬಗೋಡಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಭಾವನಾ ಕೂಡ ಒಬ್ಬಳು. ಆನ್‍ಲೈನ್‍ನಲ್ಲಿ ನೀಡಲಾದ ಪ್ರಶ್ನೆಗಳಿಗೆ ಸಮರ್ಥ ಉತ್ತರ ನೀಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯನ್ನು ಆಯ್ಕೆ ಮಾಡಲಾಗಿದೆ.

ಭಾವನಾ ತಂದೆ ರಮೇಶ್ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದು, ತಾಯಿ ಭಾರತಿ ಶಾಲೆಯೊಂದರಲ್ಲಿ ಆಯಾ ಆಗಿ ಕೆಲಸ ಮಾಡುತ್ತಿದ್ದಾರೆ. ಈ ಕುಟುಂಬದ ಬಾಲಕಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಪಡೆದಿರುವುದು ಹೆತ್ತವರಿಗೆ ಹಾಗೂ ಗ್ರಾಮಕ್ಕೆ ಹೆಮ್ಮೆ ತಂದಿದೆ.

ವಿದ್ಯಾರ್ಥಿನಿ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವುದು ಆಕೆ ಓದುತ್ತಿರುವ ಶಾಲೆಯ ಶಿಕ್ಷಕರಲ್ಲಿ ಸಂತಸ ತಂದಿದೆ. ವಿದ್ಯಾರ್ಥಿನಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಆರ್ ರಾಮಮೂರ್ತಿ ಮತ್ತು ಮುಖ್ಯೋಪಾಧ್ಯಾಯ ಸಿ. ನಾರಾಯಣಸ್ವಾಮಿ ಅಭಿನಂದಿಸಿದ್ದಾರೆ.

Comments are closed.