
ಕಲಬುರಗಿ: ಜೆಎನ್‍ಯು ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತು ಬಲಪಂಥೀಯರ ಕೆಂಗಣ್ಣಿಗೆ ಗುರಿಯಾದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಟನೆ ‘ಛಪಾಕ್’ ಸಿನಿಮಾ ನೋಡದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಪ್ರಾರಂಭವಾಗಿದೆ. ಆದರೆ ಇದಕ್ಕೆ ಕಲಬುರಗಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಕೌಂಟರ್ ನೀಡಿದ್ದಾರೆ.
ಈ ಹಿನ್ನೆಲೆ ಶನಿವಾರ ಕಲಬುರಗಿಯ ಮಿರಜ್ ಚಿತ್ರಮಂದಿರದಲ್ಲಿ ಮಧ್ಯಾಹ್ನ 1 ಗಂಟೆಯ ಹಿಂದಿ ಸಿನಿಮಾ ‘ಛಾಪಕ್’ ಶೋನ ಎಲ್ಲಾ ಟಿಕೆಟ್‍ಗಳನ್ನು ಬುಕ್ ಮಾಡಲಾಗಿದೆ. ಅಷ್ಟೇ ಅಲ್ಲದೆ ಸಾಧ್ಯವಾದರೆ ಶಾಸಕ ಪ್ರಿಯಾಂಕ್ ಖರ್ಗೆ ಸಹ ಸಿನಿಮಾ ವೀಕ್ಷಣೆ ಮಾಡಲಿದ್ದಾರೆ. ಇದನ್ನೂ ಓದಿ: ರೀಲ್, ರಿಯಲ್‍ನಲ್ಲಿಯೂ ನೀವು ಬೋಲ್ಡ್: ದೀಪಿಕಾಗೆ ಧನ್ಯವಾದ ಹೇಳಿದ ಪ್ರಕಾಶ್ ರೈ
ಈ ಕುರಿತು ಶಾಸಕ ಪ್ರಿಯಾಂಕ್ ಖರ್ಗೆ ಅವರು ಟ್ವೀಟ್ ಮಾಡಿದ್ದು, ಕಾಂಗ್ರೆಸ್ಸಿನ ಈ ಪ್ರಯತ್ನ ಆ್ಯಸಿಡ್ ಸಂತ್ರಸ್ತೆಯ ಜೊತೆಗೆ ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎನ್ನುವ ಸಂದೇಶ ಕೊಡುತ್ತದೆ. ಅಲ್ಲದೆ ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧದ ಪ್ರದರ್ಶನವಾಗಿದೆ ಎಂದು ಬರೆದುಕೊಂಡಿದ್ದಾರೆ.
ಶನಿವಾರ ಮಧ್ಯಾಹ್ನ 12:30ರ ಸುಮಾರಿಗೆ 1 ಗಂಟೆಯ ಶೋ ಮುನ್ನ ಶಾಸಕರು ಉಪಸ್ಥಿತರಿರಲಿದ್ದಾರೆ. ಅಲ್ಲದೇ ಜೆಎನ್‍ಯು ಗಾಯಾಳು ವಿದ್ಯಾರ್ಥಿಗಳನ್ನು ಭೇಟಿಯಾಗಿರುವುದಕ್ಕೆ ತೀವ್ರ ಟೀಕೆಗೆ ಗುರಿಯಾಗಿರುವ ನಟಿ ದೀಪಿಕಾ ಪಡುಕೋಣೆ ಅವರಿಗೆ ಶುಭಹಾರೈಸಲಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ತಿಳಿಸಿದ್ದಾರೆ.
Comments are closed.