ಕರ್ನಾಟಕ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲಸಕ್ಕೆ ಸೇರಿದ ನಿವೇದಿತಾ ಗೌಡ

Pinterest LinkedIn Tumblr


ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ.

ಬಾರ್ಬಿ ಡಾಲ್ ನಿವೇದಿತಾ ಗೌಡ ಏರ್​ಪೋರ್ಟ್​ ಕೆಲಸ ಮಾಡುವ ಗುರಿಯಿಟ್ಟುಕೊಂಡಿದ್ದರು. ಅದರಂತೆ ಅವರಿಗೆ ಇದೀಗ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಬಿಐಎಎಲ್)ದಲ್ಲಿ ಆಪರೇಟರ್ ಅಸಿಸ್ಟೆಂಟ್ ಕೆಲಸ ಸಿಕ್ಕಿದೆ.

ಈ ವಿಚಾರವನ್ನು ನಿವೇದಿತಾ ಗೌಡ ತಮ್ಮ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿ, ಕೊನೆಗೂ ಎಂದು ಬರೆದು ವಿಮಾನ ಹಾಗೂ ಹಾರ್ಟ್ ಎಮೋಜಿ ಹಾಕಿಕೊಂಡಿದ್ದಾರೆ. ಇದನ್ನು ನೋಡಿದ 79 ಸಾವಿರಕ್ಕೂ ಅಧಿಕ ನೆಟ್ಟಿಗರು ಅಭಿನಂದನೆ ತಿಳಿಸಿದ್ದಾರೆ.

ಮದುವೆ ತಯಾರಿ ನಡುವೆಯೂ ನಿವೇದಿತಾ ಗೌಡ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ನನಗೆ ಏರ್​ಪೋರ್ಟ್​ ನಲ್ಲಿ ಕೆಲಸ ಮಾಡಬೇಕೆಂಬ ಆಸೆ ಇತ್ತು. ಈಗ ನಾನು ಇಷ್ಟಪಟ್ಟ ಕೆಲಸವೇ ಸಿಕ್ಕಿದೆ. ಏರ್​ಪೋರ್ಟ್​ ನಲ್ಲಿ ಕೆಲಸ ಮಾಡಲು ತುಂಬಾ ತಾಳ್ಮೆ, ಫ್ಯಾಶನ್ ಮತ್ತು ಆಸಕ್ತಿ ಇರಬೇಕು. ಪ್ರತಿಷ್ಠಿತ ಕಂಪೆನಿಯಲ್ಲಿ ಕೆಲಸ ಸಿಕ್ಕಿದ್ದು, ಆಪರೇಶನ್ ಅಸಿಸ್ಟಂಟ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ತಮ್ಮ ಕೆಲಸದ ಬಗ್ಗೆ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ನನ್ನ ಮತ್ತು ಚಂದನ್ ಇಷ್ಟದಂತೆ ಮದುವೆ ನಡೆಯುತ್ತಿದೆ. ಸದ್ಯಕ್ಕೆ ಇಬ್ಬರು ಕೆಲಸದಲ್ಲಿ ಬ್ಯುಸಿಯಿದ್ದೇವೆ. ಮನೆಯವರು ಮದುವೆ ತಯಾರಿಯನ್ನು ಮಾಡಿಕೊಳ್ಳುತ್ತಿದ್ದಾರೆ ಎಂದು ತಮ್ಮ ಮದುವೆಯ ತಯಾರಿಯ ಬಗ್ಗೆ ನಿವೇದಿತಾ ಹೇಳಿದ್ದಾರೆ.

ಅಕ್ಟೋಬರ್ 21ರಂದು ಚಂದನ್ ಶೆಟ್ಟಿ ತಮ್ಮ ಆತ್ಮೀಯ ಗೆಳತಿ ಬಾರ್ಬಿ ಗರ್ಲ್ ನಿವೇದಿತಾ ಗೌಡ ಜೊತೆ ಮೈಸೂರಿನ ಖಾಸಗಿ ಹೋಟೆಲಿನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ಶುಭ ಸಮಾರಂಭದಲ್ಲಿ ಎರಡೂ ಕುಟುಂಬದ ಸದಸ್ಯರು ಹಾಗೂ ಆಪ್ತರಷ್ಟೇ ಭಾಗಿಯಾಗಿದ್ದರು.

ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಅಭಿಮಾನಿಗಳ ಮುಂದೆ ಗೆಳತಿ ನಿವೇದಿತಾರಿಗೆ ಪ್ರಪೋಸ್ ಮಾಡಿದ್ದರು. ವೇದಿಕೆಯಲ್ಲಿಯೇ ರಿಂಗ್ ತೊಡಿಸಿ ತಮ್ಮ ಪ್ರೇಮ ವಿಚಾರವನ್ನು ಚಂದನ್ ಅಧಿಕೃತವಾಗಿ ಹೇಳಿಕೊಂಡಿದ್ದರು.

ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಎಂದು ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ ಎಂಬಿತ್ಯಾದಿ ಸುದ್ದಿಗಳು ಹರಿದಾಡಿದ್ದವು. ಆದ್ರೆ ಎಲ್ಲಿಯೂ ಚಂದನ್ ಮತ್ತು ನಿವೇದಿತಾ ತಮ್ಮ ಸಂಬಂಧದ ಬಗ್ಗೆ ಸ್ಪಷ್ಟವಾಗಿ ಹೇಳಿಕೊಂಡಿರಲಿಲ್ಲ. ಕೊನೆಗೆ ದಸರಾ ಹಬ್ಬದಂದು ತಮ್ಮ ಪ್ರೀತಿಯನ್ನು ಚಂದನ್ ಹೇಳಿಕೊಂಡಿದ್ದರು.

Comments are closed.