ಕರ್ನಾಟಕ

ಬೆಂಗಳೂರಲ್ಲಿ ಸಿಎಎ ಜಾಗೃತಿ ಜಾಥಾ ವೇಳೆ ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಕೊಲೆಗೆ ಸಂಚು !

Pinterest LinkedIn Tumblr

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆದಿದ್ದವು. ಆದರೆ, ಸಿಎಎಯಿಂದ ದೇಶದ ಅಲ್ಪಸಂಖ್ಯಾತರಿಗೆ ಯಾವುದೆ ತೊಂದರೆ ಆಗದು ಎನ್ನುವ ಬಗ್ಗೆ ಜಾಗೃತಿ ಮೂಡಿಸಲು ಬೆಂಗಳೂರಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಂಸದ ತೇಜಸ್ವಿ ಸೂರ್ಯ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕೊಲೆಗೆ ಸ್ಕೆಚ್ ನಡೆದಿತ್ತು ಎನ್ನುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.

ಡಿ. 22ರಂದು ಟೌನ್​ಹಾಲ್ ಬಳಿ ಸಿಎಎ ಜಾಗೃತಿ ಜಾಥಾ ನಡೆದಿತ್ತು. ಇದರಲ್ಲಿ ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಸೇರಿ ಅನೇಕ ಪ್ರಮುಖರು ಪಾಲ್ಗೊಂಡಿದ್ದರು. ಸಿಎಎ ಜಾಥಾ ಮುಗಿಸಿ ತೆರಳುವಾಗ ಆರ್​ಎಸ್​ಎಸ್​ ಕಾರ್ಯಕರ್ತ ವರುಣ್ ಮೇಲೆ ಜೆ.ಸಿ ನಗರದ ರಸ್ತೆಯಲ್ಲಿ 6 ಜನ ಎಸ್​ಡಿಪಿಐ ಕಾರ್ಯಕರ್ತರಿಂದ ಕೊಲೆಗೆ ಯತ್ನ ನಡೆದಿತ್ತು.

2 ಬೈಕ್​ಗಳಲ್ಲಿ ಬಂದಿದ್ದ ಆರೋಪಿಗಳು ವರುಣ್ ಮೇಲೆ ರಾಡ್ ಹಾಗೂ ಲಾಂಗ್​ಗಳಿಂದ ಹಲ್ಲೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಸಾಧಿಕ್, ಅಕ್ಬರ್ ಸೇರಿ ಆರು ಜನರನ್ನ ಪೊಲೀಸರು ಬಂಧಿಸಿದ್ದರು. ಈ ಆರೋಪಿಗಳ ವಿಚಾರಣೆಯಲ್ಲಿ ಶಾಕಿಂಗ್ ವಿಚಾರ ಬೆಳಕಿಗೆ ಬಂದಿದೆ. ವರುಣ್ ಇವರ ಟಾರ್ಗೆಟ್​ ಆಗಿರಲಿಲ್ಲವಂತೆ. ​ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆಯನ್ನು ಹತ್ಯೆ ಮಾಡುವುದು ನಮ್ಮ ಮುಖ್ಯ ಉದ್ದೇಶ ಆಗಿತ್ತು ಎಂದು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

ಸಿಎಎ ಜಾರಿಗೆ ಬಂದಾಗಿನಿಂದಲೂ ಚಕ್ರವರ್ತಿ ಸೂಲಿಬೆಲೆ ಹಾಗೂ ತೇಜಸ್ವಿ ಸೂರ್ಯ ಕೇಂದ್ರ ಸರ್ಕಾರದ ಪರ ಮಾತನಾಡುತ್ತಲೇ ಇದ್ದರು. ಇದು ಇವರನ್ನು ಕೆರಳಿಸಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ, ಜನ ಸೇರಿರುವ ಭಾಗದಲ್ಲಿ ಹತ್ಯೆ ಸುಲಭ ಎಂದು ಆರೋಪಿಗಳು ಸಂಚು ರೂಪಿಸಿದ್ದರು ಎನ್ನಲಾಗಿದೆ.

Comments are closed.