ಕರ್ನಾಟಕ

ಬಗೆಹರಿಯದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ; ಗೊಂದಲದಲ್ಲಿ ‘ಕೈ’ ಹೈಕಮಾಂಡ್

Pinterest LinkedIn Tumblr


ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ ಗೊಂದಲ ಇನ್ನೂ ಬಗೆಹರಿಯುವ ಲಕ್ಷಣ ಕಾಣಿಸುತ್ತಿಲ್ಲ. ಶುಕ್ರವಾರ ಅಥವಾ ಶನಿವಾರ ಅಧ್ಯಕ್ಷ ಸ್ಥಾನ ಘೋಷಣೆ ಆಗುತ್ತದೆ ಎಂಬ ನಿರೀಕ್ಷೆಯಿತ್ತು, ಆದರೆ ರಾಜ್ಯ ಮುಖಂಡರ ನಡುವೆ ಗೊಂದಲ ಬಗೆಹರಿಯದ ಕಾರಣದಿಂದಾಗಿ ಹೈ ಕಮಾಂಡ್ ಅಧ್ಯಕ್ಷ ಸ್ಥಾನ ಘೋಷಣೆ ತಡೆಯಾಗಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅವರ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗಿತ್ತು. ಇನ್ನೇನು ಹೈಕಮಾಂಡ್ ಎರಡು ದಿನಗಳಲ್ಲಿ ಅಧಿಕೃತವಾಗಿ ಘೋಷಣೆ ಮಾಡುತ್ತದೆ ಎಂಬ ನಿರೀಕ್ಷೆಯೂ ಇತ್ತು. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗರು ಸಂಭ್ರಮಾಚರಣೆಯಲ್ಲಿ ನಿರತರಾಗಿದ್ದರು.

ಡಿಕೆ ಶಿವಕುಮಾರ್ ಕೂಡಾ ಟೆಂಪಲ್‌ ರನ್‌ ನಲ್ಲಿ ಬ್ಯುಸಿಯಾಗಿದ್ದರು. ಆದರೆ ಎರಡು ದಿನ ಕಳೆದರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಘೋಷಣೆಯಾಗದೆ ಬಾಕಿ ಉಳಿದಿದೆ. ಡಿಕೆ ಶಿವಕುಮಾರ್ ಆಯ್ಕೆಗೆ ಸಿದ್ದರಾಮಯ್ಯ ಬಣ ವಿರೋಧ ವ್ಯಕ್ತಪಡಿಸಿದ್ದು ಅಲ್ಲದೆ ಒಂದು ವೇಳೆ ಅಧ್ಯಕ್ಷ ಸ್ಥಾನ ಡಿಕೆಶಿಗೆ ನೀಡಿದರೆ ನಾಲ್ಕು ಕಾರ್ಯಾಧ್ಯಕ್ಷ ಸ್ಥಾನ ನೇಮಕ ಮಾಡಬೇಕು ಎಂಬ ಬೇಡಿಕೆಯನ್ನು ಇಟ್ಟಿದ್ದಾರೆ ಎನ್ನಲಾಗಿದೆ.

ಈ ಕಾರಣಕ್ಕಾಗಿ ಹೈ ಕಮಾಂಡ್‌ ಸದ್ಯ ಯಾವುದೇ ತೀರ್ಮಾನವನ್ನು ಪ್ರಕಟ ಮಾಡಿಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ನಾಲ್ವರು ಕಾರ್ಯಾಧ್ಯಕ್ಷ ನೇಮಕ ಮಾಡಿದರೆ ಅಧಿಕಾರ ಹಂಚಿಕೆಯಾಗುತ್ತದೆ ಹಾಗೂ ಮತ್ತಷ್ಟು ಗೊಂದಲಕ್ಕೆ ಕಾರಣವಾಗುತ್ತದೆ ಎಂಬುವುದು ಡಿಕೆ ಶಿವಕುಮಾರ್ ವಾದವಾಗಿದೆ.

ಅಧ್ಯಕ್ಷ ಸ್ಥಾನದ ಕುರಿತಾಗಿ ರಾಜ್ಯ ನಾಯಕರಲ್ಲಿ ಒಮ್ಮತದ ನಿರ್ಧಾರ ಮೂಡದೇ ಇರುವ ಕಾರಣದಿಂದಾಗಿ ಸದ್ಯ ಹೈಕಮಾಂಡ್ ಸುಮ್ಮನಾಗಿದೆ. ಮತ್ತೊಂದು ಸುತ್ತಿನ ಮಾತುಕತೆಯ ಬಳಿಕ ಅಧ್ಯಕ್ಷ ಸ್ಥಾನ ಘೋಷಣೆ ಮಾಡುವ ಸಾಧ್ಯತೆ ಇದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ಹಾಗೂ ಎಂಬಿ ಪಾಟೀಲ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಸಿದ್ದರಾಮಯ್ಯ ಬಣ ಎಂಬಿ ಪಾಟೀಲ್‌ ಪರವಾಗಿದ್ದರೆ ಹಿರಿಯ ಕಾಂಗ್ರೆಸ್ ಮುಖಂಡರು ಡಿಕೆ ಶಿವಕುಮಾರ್ ಪರವಾಗಿದ್ದಾರೆ.

Comments are closed.