ಕರ್ನಾಟಕ

ಮತ್ತೆ ಇಳಿಕೆ ಕಂಡ ಪೆಟ್ರೋಲ್‌, ಡೀಸೆಲ್‌ ದರ

Pinterest LinkedIn Tumblr


ಬೆಂಗಳೂರು: ಕಳೆದ ಕೆಲವು ದಿನಗಳಿಂದ ಪೆಟ್ರೋಲ್‌ ದರ ನಿರಂತರವಾಗಿ ಇಳಿಕೆ ಕಂಡು ಬಂದಿದೆ. ಬೆಂಗಳೂರು ಸೇರಿ ದೇಶದ ಇತರೆ ಮಹಾ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಇದರಿಂದ ವಾಹನ ಸವಾರರಿಗೆ ಕೊಂಚ ನೆಮ್ಮದಿ ತಂದಿದೆ.

ರಾಷ್ಟ್ರದ ಎಲ್ಲ ಮೆಟ್ರೊ ನಗರಗಳಲ್ಲೂ ಕೆಲವು ದಿನಗಳಿಂದ ಪ್ರತಿ ದಿನ 10-15 ಪೈಸೆ ಇಳಿಕೆಯಾಗುತ್ತಿತ್ತು. ಆದರೆ, ಜನವರಿ 26ರಂದು ಪೆಟ್ರೋಲ್‌ ಬೆಲೆಯಲ್ಲಿ 27 – 28 ಪೈಸೆ ಕಂಡುಬಂದಿದೆ. ಬೆಂಗಳೂರಲ್ಲಿ ಪೆಟ್ರೋಲ್‌ ದರ 28 ಪೈಸೆ ಇಳಿಕೆಯಾಗಿದ್ದು, 76.64 ರೂ. ಇದೆ. ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ 74.16 ರೂ. ಗೆ ಇಳಿಕೆಯಾಗಿದೆ. ಇದೇ ರೀತಿ ಚೆನ್ನೈನಲ್ಲಿ 77.03 ರೂ., ಕೋಲ್ಕತಾದಲ್ಲಿ 76.77 ರೂ., ಹಾಗೂ ವಾಣಿಜ್ಯ ನಗರಿ ಮುಂಬಯಿನಲ್ಲಿ ಪೆಟ್ರೋಲ್‌ ದರ 79.76 ರೂ. ಇದೆ.

ಇನ್ನು, ಎಲ್ಲ ಮಹಾ ನಗರಗಳಲ್ಲಿ ಡೀಸಲ್‌ ದರವೂ 30 – 32 ಪೈಸೆಯಷ್ಟು ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಡೀಸೆಲ್‌ ದರ ಲೀಟರ್‌ಗೆ 69.55 ರೂ. ಇದೆ. ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ 67.31 ರೂ., ಚೆನ್ನೈನಲ್ಲಿ 71.11 ರೂ., ಕೋಲ್ಕತಾದಲ್ಲಿ 69.67 ರೂ. ಹಾಗೂ ವಾಣಿಜ್ಯ ನಗರಿ ಮುಂಬಯಿನಲ್ಲಿ 70.56 ರೂ. ಇದೆ.

ಇನ್ನು, ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಇಳಿಕೆ ಕಂಡಿದ್ದು, ಒಂದು ಬ್ಯಾರೆಲ್‌ ಕಚ್ಚಾ ತೈಲ ದರ 3,876 ರೂ. ಇದೆ.

ಸೂಚನೆ: ದೈನಂದಿನ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಪರಿಷ್ಕರಣೆಯು ವಿತರಣಾ ಕಂಪನಿಗಳು ಮತ್ತು ಆಯಾ ಪ್ರದೇಶಕ್ಕೆ ಅನುಗುಣವಾಗಿ ಸ್ವಲ್ಪ ವ್ಯತ್ಯಾಸಗಳು ಇರುತ್ತವೆ ಎಂಬುದನ್ನು ಗ್ರಾಹಕರು ಗಮನಿಸತಕ್ಕದ್ದು.

Comments are closed.