ಕರ್ನಾಟಕ

ಕಲಬುರಗಿಯಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ; ಸಮ್ಮೇಳನಾಧ್ಯಕ್ಷರ ವೈಭವದ ಮೆರವಣಿಗೆಗೆ ಚಾಲನೆ

Pinterest LinkedIn Tumblr

ಕಲಬುರಗಿ: ಕಲ್ಯಾಣ ಕರ್ನಾಟಕ, ಶರಣರ ನಾಡು ಕಲಬುರಗಿಯಲ್ಲಿ ಇಂದಿನಿಂದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ವೈಭವದ ಚಾಲನೆ ಸಿಕ್ಕಿದೆ.

ಉಪಮುಖ್ಯಮಂತ್ರಿ, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ಗೋವಿಂದ ಕಾರಜೋಳ ರಾಷ್ಟ್ರಧ್ವಜಾರೋಹಣ ಮಾಡಿದರೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಗಾರ್ ಪರಿಷತ್ ಧ್ವಜಾರೋಹಣ ನೆರವೇರಿಸಿ ಸಮ್ಮೇಳನವನ್ನು ಉದ್ಘಾಟಿಸಿದ್ದಾರೆ. ಇನ್ನು ಕಲಬುರಗಿ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಸಮ್ಮೇಳನ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ವೀರಭದ್ರ ಸಿಂಪಿ ನಾಡಧ್ವಜಾರೋಹಣ ನೆರವೇರಿಸಿದರು.

ಸಮ್ಮೇಳನಾಧ್ಯಕ್ಷರಾದ ಎಚ್.ಎಸ್. ವೆಂಕಟೇಶಮೂರ್ತಿಯವರನ್ನೊಳಗೊಂಡ ವೈಭವದ ಮೆರವಣಿಗೆಗೆ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದ ಬಳಿ ಜಿಲ್ಲಾಧಿಕಾರಿಗಳಾದ ಶರತ್ ಬಿ. ಚಾಲನೆ ನೀಡಿದರು.ಈ ವೇಳೆ ಸಂಸದ ಉಮೇಶ್ ಜಾಧ್ವ, ಹಲವಾರು ಸಾಹಿತಿಗಳು ಉಪಸ್ಥಿತರಿದ್ದರು.

ನಲವತ್ತಕ್ಕೆ ಹೆಚ್ಚು ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದು ಏಳು ಸಾವಿರ ಮಂದಿ ಸಾಹಿತ್ಯ ಪ್ರೇಮಿಗಳು ಹಾಜರಿದ್ದರು.

Comments are closed.