
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಭರ್ಜರಿ ತಯಾರಿ ಮಾಡಲಾಗಿದೆ.
ಗಾಜಿನಮನೆಯಲ್ಲಿ 1000 ಆಸನ ವ್ಯವಸ್ಥೆ ಮಾಡಲಾಗಿದೆ. ಅದರಲ್ಲಿ 200 ಆಸನಗಳು ಶಾಸಕರು ಮತ್ತು ಜನಪ್ರತಿನಿಧಿಗಳಿಗೆ, 100 ಆಸನಗಳು ನೂತನ ಸಚಿವರು ಮತ್ತು ಅವರ ಕುಟುಂಬಸ್ಥರಿಗೆ ಹಾಗೂ ಉಳಿದ 700 ಆಸನಗಳನ್ನು ಅಭಿಮಾನಿಗಳು ಮತ್ತು ಕಾರ್ಯಕರ್ತರಿಗೆ ಮೀಸಲಿಡಲಾಗಿದೆ.
ಇಂದು ಉಪ ಚುನಾವಣೆಯಲ್ಲಿ ಗೆದ್ದ ಮಹೇಶ್ ಕುಮಟಹಳ್ಳಿ ಅವರನ್ನು ಬಿಟ್ಟು 10 ಶಾಸಕರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನಮಾನ ನೀಡಲಾಗಿದೆ. ಈ ಮೂಲಕ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್, ಸುಧಾಕರ್, ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್, ಗೋಪಾಲಯ್ಯ, ನಾರಾಯಣಗೌಡ ಹಾಗೂ ಶ್ರೀಮಂತ್ ಪಾಟೀಲ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಜಭವನದ ಬಳಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳದಿಂದ ಅಂತಿಮ ಹಂತದ ಪರಿಶೀಲನೆ ನಡೆಸಲಾಗಿದೆ.
ನೂತನ ಸಚಿವರ ಬೆಂಬಲಿಗರು ಹರ್ಷೋದ್ಘಾರ ಕೂಗುತ್ತಿದ್ದಾರೆ. ಮುಖ್ಯಮಂತ್ರಿ ಪರವಾಗಿ ಕೂಡ ಜಯಘೋಷಣೆ ಮಾಡುತ್ತಿದ್ದಾರೆ.
Comments are closed.