ಕರ್ನಾಟಕ

ಮೂಲ ಬಿಜೆಪಿ- ವಲಸೆ ಬಿಜೆಪಿಗರ ನಡುವೆ ಸಚಿವ ಸ್ಥಾನದ ಬಗ್ಗೆ ಗೊಂದಲವಿಲ್ಲ: ಯಡಿಯೂರಪ್ಪ

Pinterest LinkedIn Tumblr

ಶಿವಮೊಗ್ಗ: ನೂತನ ಸಚಿವರಿಗೆ ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲ. ನಾಳೆ ನೂತನ ಸಚಿವರಿಗೆ ಖಾತೆ ಹಂಚಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಶಿಕಾರಿಪುರದ ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಉಮೇಶ್ ಕತ್ತಿ ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ಜೊತೆ ಮಾತುಕತೆ ನಡೆಸಿದ್ದರು. ಅಲ್ಲಿಂದ ಹಿಂದಿರುಗಿದ ಬಳಿಕ ತಮ್ಮ ಜೊತೆಗೂ ಮಾತನಾಡಿದ್ದಾರೆ. ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಅನಿರ್ವಾಯ ಕಾರಣದಿಂದ ಅವರಿಗೆ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಅರಗ ಜ್ಞಾನೇಂದ್ರ ಸೇರಿದಂತೆ ಹಲವರು ಸಚಿವ ಸ್ಥಾನದ ಅಕಾಂಕ್ಷಿಗಳಿದ್ದಾರೆ. ಅನಿರ್ವಾಯ ಸ್ಥಿತಿ ಇರುವುದರಿಂದ ಎಲ್ಲರಿಗೂ ಮನವರಿಕೆ ಮಾಡಿದ್ದೇನೆ. ಮೂಲ ಬಿಜೆಪಿಗರಿಗೆ ಹಾಗೂ ವಲಸೆ ಬಿಜೆಪಿಗರ ನಡುವೆ ಸಚಿವ ಸ್ಥಾನದ ಬಗ್ಗೆ ಗೊಂದಲವಿಲ್ಲ. ಇದು ಮಾಧ್ಯಮ ಸೃಷ್ಟಿ ಎಂದು ಯಡಿಯೂರಪ್ಪ ಹೇಳಿದರು.

ಬೆಂಗಳೂರು ನಗರಾಭಿವೃದ್ಧಿ ಖಾತೆಗಾಗಿ ಆರಂಭವಾದ ಪೈಪೋಟಿ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ನಗರಾಭಿವೃದ್ಧಿ ಖಾತೆಗಾಗಿ ಭಾರೀ ಪೈಪೋಟಿ ಆರಂಭವಾಗಿದ್ದು, ಮೂಲ ವಲಸಿಗರ ನಡುವೆ ಜಟಾಪಟಿ ಆರಂಭವಾಗಿದೆ. ಬಹುಬೇಡಿಕೆಯ ಬೆಂಗಳೂರು ನಗರಾಭಿವೃದ್ಧಿ ಖಾತೆಗಾಗಿ ಭಾರೀ ಒತ್ತಡ ಯಡಿಯೂರಪ್ಪ ಅವರ ಮೇಲಿದ್ದು, ಮೂಲ, ವಲಸೆ ಸೇರಿದಂತೆ, ನೂತನ ಸಚಿವರೂ ಕೂಡ ಬೆಂಗಳೂರು ನಗರಾಭಿವೃದ್ಧಿ ಖಾತೆಗಾಗಿ ಲಾಬಿ ನಡೆಸಿದ್ದಾರೆ. ಆರು ತಿಂಗಳ ಹಿಂದೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಮಧ್ಯೆ ಖಾತೆಗಾಗಿ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಒತ್ತಡ ಹೆಚ್ಚಾಗುತ್ತಿದ್ದಂತೆಯೆ ಎಚ್ಚೆತ್ತುಕೊಂಡಿದ್ದ ಯಡಿಯೂರಪ್ಪ ಅವರು ಬೆಂಗಳೂರು ನಗರಾಭುವೃದ್ಧಿ ಖಾತೆಯನ್ನು ತಮ್ಮಲ್ಲಿಯೇ ಇಟ್ಟುಕೊಂಡಿದ್ದರು.

Comments are closed.