ಕರ್ನಾಟಕ

ಆಶ್ಲೀಲ ನೃತ್ಯ: ಬಾರ್- ರೆಸ್ಟೋರೆಂಟ್ ಗಳ ಮೇಲೆ ದಾಳಿ

Pinterest LinkedIn Tumblr


ಬೆಂಗಳೂರು: ನಿಯಮಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಡ್ಯಾನ್ಸ್ ಬಾರ್ ನಡೆಸುತ್ತಿದ್ದ ಮೂರು ಬಾರ್‌ ಆಂಡ್ ರೆಸ್ಟೋರೆಂಟ್‌ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿ ವೇಳೆಯಲ್ಲಿ 14 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, 66 ಮಹಿಳೆಯರನ್ನು ರಕ್ಷಿಸಿ 1,24,360 ರೂ. ವಶಪಡಿಸಿಕೊಂಡಿದ್ದಾರೆ

ಕಲಾಸಿಪಾಳ್ಯದ ಲಾಲ್‌ಬಾಗ್ ಪೋರ್ಟ್‌ ರಸ್ತೆಯ ಕೋಸ್ಟರಿಕಾ ಬಾರ್ ಆಂಡ್ ರೆಸ್ಟೋರೆಂಟ್ 1 ಮತ್ತು 2ನೇ ಮಹಡಿಯಲ್ಲಿ ಅಕ್ರಮವಾಗಿ ಮಹಿಳೆಯರನ್ನು ಇರಿಸಿಕೊಂಡು ನಿಯಮ ಉಲ್ಲಂಘಿಸಿ ಅಕ್ರಮವಾಗಿ ಡ್ಯಾನ್ಸ್ ಬಾರ್ ನಡೆಸುತ್ತಿದ್ದಾರೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

Comments are closed.