ಕರ್ನಾಟಕ

ಇಂದು ಕರ್ನಾಟಕ ಬಂದ್: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ

Pinterest LinkedIn Tumblr


ಬೆಂಗಳೂರು: ಸರೋಜಿನಿ ಮಹಿಷಿ ಯೋಜನೆ ಜಾರಿಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗುರುವಾರ ನಡೆಯಲಿದ್ದು, ಯಾವುದೇ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡುವುದಿಲ್ಲಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಫೆ.13 ಗುರುವಾರ ಕನ್ನಡ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಸೇರಿ ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಈ ಪ್ರಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆ ಯಾವುದೇ ಶಾಲಾ ಕಾಲೇಜುಗಳಿಗೆ ಅಧಿಕೃತವಾಗಿ ರಜೆ‌ ಘೋಷಣೆ‌ ಮಾಡುವುದಿಲ್ಲವೆಂದು ಶಿಕ್ಷಣ ಸಚಿವರು ಹೇಳಿದ್ದಾರೆ.

ಆದರೆ ಆಯಾ ಜಿಲ್ಲಾಡಳಿತಗಳು ಸ್ಥಳೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ಕ್ರಮ ವಹಿಸಬಹುದಾಗಿದೆಯೆಂದು ಸಚಿವರು ಸ್ಪಷ್ಟ ಪಡಿಸಿದ್ದಾರೆ.

Comments are closed.