ಕರ್ನಾಟಕ

ಯಾರಿಗೂ ಬೇಡ, ನನಗೆ ಕೊಡಿ: ಸೋನಿಯಾ ಗಾಂಧಿಗೆ ಮುನಿಯಪ್ಪ ಮನವಿ

Pinterest LinkedIn Tumblr


ನವದೆಹಲಿ: ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರ ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಮಾಡಿ ಚರ್ಚಿಸಿದ್ದಾರೆ. ನವದೆಹಲಿಯ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಭೇಟಿ ಮಾಡಿದ ಮುನಿಯಪ್ಪ ಶೀಘ್ರ ಅಧ್ಯಕ್ಷರ ನೇಮಕ ಮಾಡುವಂತೆ ಮನವಿ ಮಾಡಿದ್ದಾರೆ.

ಭೇಟಿ ವೇಳೆ ತಮ್ಮನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಕೆಪಿಸಿಸಿ ಹುದ್ದೆಗೆ ಡಿ.ಕೆ ಶಿವಕುಮಾರ್ ಮತ್ತು ಎಂ.ಬಿ ಪಾಟೀಲ್ ಹೆಸರು ಕೇಳಿ ಬರುತ್ತಿದೆ. ಈ ಇಬ್ಬರು ನಾಯಕರಲ್ಲಿ ಯಾರಿಗೆ ಅಧ್ಯಕ್ಷ ಸ್ಥಾನ ನೀಡಿದರೂ ಪಕ್ಷದಲ್ಲಿ ಭಿನ್ನಮತ ಶುರುವಾಗಲಿದೆ. ಇದು ಪಕ್ಷದ ಬೆಳವಣಿಗೆ ಮಾರಕವಾಗಲಿದ್ದು ನನಗೆ ಅಧ್ಯಕ್ಷ ಸ್ಥಾನ ನೀಡಿದರೆ ಎರಡು ಬಣಗಳನ್ನು ಒಗ್ಗೂಡಿಸಿಕೊಂಡು ಹೋಗುವ ಕೆಲಸ ಮಾಡುತ್ತೇವೆ ಎಂದು ಮನವೊಲಿಸುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.

ಭೇಟಿ ಬಳಿಕ ಮಾತನಾಡಿದ ಕೆ.ಹೆಚ್ ಮುನಿಯಪ್ಪ, ರಾಜ್ಯ ರಾಜಕೀಯದ ಬೆಳವಣಿಗೆ ಬಗ್ಗೆ ಮಾತನಾಡಿದೆ. ಬಿಜೆಪಿ ವಿರುದ್ಧ ಹೋರಾಟ ಚುರುಕುಗೊಳ್ಳಬೇಕು ಪಕ್ಷ ಸಂಘಟನೆ ಗಟ್ಟಿ ಮಾಡಿ, ಜನ ವಿರೋಧಿ ಕ್ರಮಗಳನ್ನು ಕೈಗೊಂಡಿರುವ ಬಿಜೆಪಿ ವಿರುದ್ಧ ಹೋರಾಡಬೇಕು ಇದಕ್ಕಾಗಿ ನಾಯಕತ್ವ ಬೇಕಿದ್ದು ಶೀಘ್ರ ನಾಯಕತ್ವ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದ್ದೇನೆ. ರಾಜ್ಯ ಕಾಂಗ್ರೆಸ್ ಬಗ್ಗೆ ಭಕ್ತ ಚರಣದಾಸ್ ಮತ್ತು ಮಧುಸೂಧನ್ ಮಿಸ್ತ್ರಿ ನೀಡಿರುವ ವರದಿ ಪರಿಗಣಿಸಬೇಕು ಎಂದು ಕೇಳಿಕೊಂಡಿದ್ದೇನೆ. ಕೆಪಿಸಿಸಿ ಅಧ್ಯಕ್ಷ ನೇಮಕದ ಬಗ್ಗೆಯೂ ವಿವರಿಸಿದೆ. ಕೆಪಿಸಿಸಿ ಅಧ್ಯಕ್ಷರ ನೇಮಕ ಶೀಘ್ರದಲ್ಲೇ ಮಾಡೋಣ ಎಂದು ಸೋನಿಯಾ ಅವರು ಹೇಳಿದ್ದಾರೆ ಎಂದರು.

Comments are closed.