ಕರ್ನಾಟಕ

ಯುವತಿಯಿಂದ ಪಾಕ್ ಪರ ಘೋಷಣೆ: ಓವೈಸಿಯನ್ನು ತನಿಖೆ ಮಾಡುತ್ತೇವೆ ಎಂದ ಬೊಮ್ಮಾಯಿ

Pinterest LinkedIn Tumblr


ಬೆಂಗಳೂರು: ಪಾಕಿಸ್ತಾನ ಜಿಂದಾಬಾದ್ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಬಿದ್ದರೆ ಸಂಸದ ಅಸಾದುದ್ದೀನ್ ಓವೈಸಿಯನ್ನು ತನಿಖೆಗೆ ಒಳಪಡಿಸಲಾಗುವುದು ಎಂದು ಗೃಹ ಸಚಿವ ಬಸವರಾಜು ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡದ ಅವರು , ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಘೋಷಣೆ ಕೂಗಿದ ಯುವತಿಯ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಮೂಲ್ಯ ನಕ್ಸಲ್‌ ಪೀಡಿತ ಪ್ರದೇಶದಿಂದ ಬಂದವಳಾಗಿದ್ದಾಳೆ. ಈ ನಿಟ್ಟಿನಲ್ಲಿ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುವುದು. ಈಗಾಗಲೇ ಕಾರ್ಯಕ್ರಮದ ಆಯೋಜಕರಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

ಕಾರ್ಯಕ್ರಮದ ಆಯೋಜಕರಲ್ಲಿ ಘಟನೆಯ ಸಂಪೂರ್ಣ ವಿವರವನ್ನು ಪಡೆಯಲಾಗುವುದು. ಅಲ್ಲದೆ ವಿಡಿಯೋ ಫೂಟೇಜನ್ನು ಪರಿಶೀಲನೆ ನಡೆಸಲಾಗುವುದು ಎಂದಿದ್ದಾರೆ.

ಗುರುವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನ್‌ ಎಂಬ ಯುವತಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಳು. ಅಮೂಲ್ಯ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Comments are closed.