ಕರ್ನಾಟಕ

ಬೆಂಗಳೂರಿನಲ್ಲಿ 3 ದಿನ ತುಂತುರು ಮಳೆ ಸಾಧ್ಯತೆ

Pinterest LinkedIn Tumblr


ಬೆಂಗಳೂರು: ಮಹಾರಾಷ್ಟ್ರದಿಂದ ರಾಜ್ಯದ ಕರಾವಳಿಯ ಭಾಗದ ವರೆಗೆ ಗಾಳಿಯ ಒತ್ತಡ ಕಡಿಮೆಯಾಗಿದ್ದು, ಇನ್ನೂ ಮೂರು ದಿನ ಬೆಂಗಳೂರು ಸೇರಿದಂತೆ ವಿವಿಧೆಡೆ ಚದುರಿದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ.

ಕಳೆದ ಮೂರು ದಿನಗಳಿಂದ ಕರಾವಳಿ, ಉತ್ತರ ಕರ್ನಾಟಕ, ಮಲೆನಾಡು ಜಿಲ್ಲೆ ಹಾಗೂ ದಕ್ಷಿಣ ಒಳನಾಡು ಭಾಗದ ಸೇರಿ ವಿವಿಧೆಡೆ ಮಳೆಯಾಗುತ್ತಿದೆ. ಭಾನುವಾರ ಬೆಳಗಾವಿ, ದಾವಣಗೆರೆ, ವಿಜಯಪುರ, ಮೈಸೂರು, ಚಿಕ್ಕಮಗಳೂರು, ಕೊಪ್ಪಳ, ಮಂಡ್ಯ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವಡೆ ಉತ್ತಮ ಮಳೆಯಾಗಿರುವುದು ವರದಿಯಾಗಿದೆ.

ಸೋಮವಾರ ಮಂಡ್ಯ, ಮೈಸೂರು, ಉಡುಪಿ, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡಿದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಇಂದಿನಿಂದ (ಮಂಗಳವಾರದಿಂದ)ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಬೆಂಗಳೂರು ಸೇರಿದಂತೆ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ. ಬಿಸಿಲ ಪ್ರಮಾಣದ ಏರಿಕೆ ಹಾಗೂ ಹವಾಮಾನ ಬದಲಾವಣೆಯಿಂದ ಮಾರ್ಚ್‌, ಮತ್ತು ಏಪ್ರಿಲ್‌ ಅವಧಿಯಲ್ಲಿಯಲ್ಲೂ ಮಳೆಯಾಗುತ್ತಿದೆ. ಈಗ ಮಳೆ ಬರುತ್ತಿರುವುದರಿಂದ ಮುಂಬರುವ ಮುಂಗಾರು ಮಳೆಯ ಮೇಲೆ ಪರಿಣಾಮವಾಗುವುದಿಲ್ಲ. ಇದರಿಂದ ಸಮುದ್ರದ ನೀರಿನ ಉಷ್ಣಾಂಶದಲ್ಲಿ ಯಾವುದೇ ಪರಿಣಾಮವಾಗಿಲ್ಲ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಶ್ರೀನಿವಾಸ್‌ ರೆಡ್ಡಿ ಅವರು ತಿಳಿಸಿದ್ದಾರೆ.

Comments are closed.