ಕರ್ನಾಟಕ

ರಾಜ್ಯದಲ್ಲಿ ಒಂದೇ ದಿನ 4 ಮಂದಿಗೆ ಕೊರೊನಾ ಸೋಂಕು ಶಂಕೆ

Pinterest LinkedIn Tumblr


ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಾಲ್ಕು ಮಂದಿಯಲ್ಲಿ ಕೊರೊನಾ ಸೋಂಕಿನ ಶಂಕೆ ವ್ಯಕ್ತವಾಗುತ್ತಿದೆ. ಮಂಗಳವಾರ ಒಂದೇ ದಿನ 97 ಜನರು ಪರೀಕ್ಷೆ ಮಾಡಿಸಿದ್ದು, ಅದರಲ್ಲಿ 4 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಜೀವ್ ಗಾಂಧಿ ಎದೆರೋಗ ಆಸ್ಪತ್ರೆಯಲ್ಲಿ ಕೊರೊನಾ ವೈರಸ್ ಟೆಸ್ಟ್ ನಡೆಯುತ್ತಿದೆ. ಮಂಗಳವಾರ ಒಂದೇ ದಿನ 97 ಜನರು ಪರೀಕ್ಷೆ ಮಾಡಿಸಿದ್ದು, ಅದರಲ್ಲಿ 4 ಮಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲಾಗಿದೆ. ನಾಲ್ಕು ಜನರಲ್ಲಿ ಒಬ್ಬರು ಸೌದಿಯಿಂದ ಆಗಮಿಸಿದ್ದರೆ ಇನ್ನೊಬ್ಬರು ಜಪಾನ್ ದೇಶದಿಂದ ಬಂದಿದ್ದಾರೆ. ಇನ್ನು ಇಬ್ಬರ ಮಾಹಿತಿ ಲಭ್ಯವಾಗಿಲ್ಲ.

ಒಟ್ಟು ರಾಜೀವ್ ಗಾಂಧಿ ಕೊರೊನಾ ಪ್ರತ್ಯೇಕ ವಾರ್ಡ್‍ನಲ್ಲಿ 5 ಜನ ಸೊಂಕು ಶಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ಕು ಮಂದಿ ರಕ್ತ ಪರೀಕ್ಷೆ ಮಾಡಲಾಗಿದ್ದು, ವೈದ್ಯರು ವರದಿಗಾಗಿ ಕಾಯುತ್ತಿದ್ದಾರೆ. ಸದ್ಯ ಕಳೆದ 10 ದಿನಗಳಿಂದ ಇರಾನ್‍ನಿಂದ ಬಂದ ವ್ಯಕ್ತಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಸೌದಿ ಅರೇಬಿಯಾದಿಂದ ಬಂದ ವ್ಯಕ್ತಿಗೆ ಜ್ವರ, ನೆಗಡಿ ಆಗಿ ಕೊರೊನಾದಂತ ಲಕ್ಷಣಗಳು ಕಂಡು ಬಂದಿದೆ. ತಕ್ಷಣ ವ್ಯಕ್ತಿ ಮಂಗಳವಾರ ರಾತ್ರಿ ಕೊರೊನಾ ವೈರಸ್ ಪರೀಕ್ಷೆ ಮಾಡಿಸಲು ಹೋಗಿದ್ದು, ಈ ವೇಳೆ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Comments are closed.