ಕರ್ನಾಟಕ

ಕುಮಾರಸ್ವಾಮಿ ಮೇಲೆ ದ್ವೇಷ ಸಾಧಿಸಿದ ಯಡಿಯೂರಪ್ಪ: ಅನಿತಾ ಕುಮಾರಸ್ವಾಮಿ

Pinterest LinkedIn Tumblr


ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನನ್ನ ಪತಿ ಕುಮಾರಸ್ವಾಮಿಯವರ ಮೇಲೆ ದ್ವೇಷ ಸಾಧಿಸಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಘೋಷಿಸಿದ್ದ ಬಡವರ ಬಂಧು, ಸಾಲಮನ್ನಾದ ವಿಚಾರ ಬಜೆಟ್‌ನಲ್ಲಿ ಪ್ರಸ್ತಾಪವೇ ಮಾಡಿಲ್ಲ ಎಂದು ಜೆಡಿಎಸ್‌ ಶಾಸಕಿ ಅನಿತಾ ಕುಮಾರಸ್ವಾಮಿ ದೂರಿದ್ದಾರೆ.

ಬಜೆಟ್‌ ಕುರಿತು ಪ್ರತಿಕ್ರಿಯಿಸಿದ ಅವರು, ಬಡವರ ಬಂಧು ಯೋಜನೆ ಕೈ ಬಿಡುವ ಮುನ್ಸೂಚನೆ ನೀಡಲಾಗಿದೆ. ರೈತರ ಸಾಲ ಮನ್ನಾ ಮುಂದುವರಿಸಿಕೊಂಡು ಹೋಗಬೇಕಿತ್ತು ಎಂದು ಹೇಳಿದರು.

ಬಜೆಟ್‌ನಲ್ಲಿ ನನಗೆ ಯಾವುದೇ ಗುಡ್‌ ಅನ್ನಿಸುವ ಅಂಶ ಇಲ್ಲ. ಇದೊಂದು ನೀರಸ ಬಜೆಟ್‌.ಯಾವುದೇ ವರ್ಗದವರಿಗೂ ಆನುಕೂಲ ಆಗುವ ಲಕ್ಷಣಗಳು ಕಾಣುತ್ತಿಲ್ಲ ಎಂದು ಹೇಳಿದರು.

Comments are closed.