ಕರ್ನಾಟಕ

ಕೊರೋನಾ ವೈರಸ್​ ಭೀತಿ; ಬೆಂಗಳೂರಿನಲ್ಲಿ 1 ತಿಂಗಳು ಶಾಲೆಗಳಿಗೆ ರಜೆ

Pinterest LinkedIn Tumblr


ಬೆಂಗಳೂರು(ಮಾ.09): ರಾಜ್ಯದಲ್ಲಿ ಕೊರೋನಾ ವೈರಸ್​ ಭೀತಿ ಶುರುವಾಗಿರುವ ಹಿನ್ನೆಲೆ, ಎಲ್ಲೆಡೆ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಸಿಲಿಕಾನ್​​ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ತಗುಲುವ ಭಯದಲ್ಲಿ ಶಿಕ್ಷಣ ಸಚಿವರು ಮುಂಜಾಗ್ರತಾ ಕ್ರಮ ವಹಿಸಿದ್ದಾರೆ.

ಕೊರೋನಾ ಭೀತಿ ಹಿನ್ನೆಲೆ, ಬೆಂಗಳೂರಿನಲ್ಲಿ ಇಂದಿನಿಂದ ಒಂದು ತಿಂಗಳು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆರೋಗ್ಯ ಇಲಾಖೆಯ ಆಯುಕ್ತರ ಸಲಹೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಎಲ್​ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಮಾತ್ರ ಒಂದು ತಿಂಗಳು ರಜೆ ಘೋಷಣೆ ಮಾಡಲಾಗಿದೆ.

ಶಾಲೆಗಳಿಗೆ ರಜೆ ಘೋಷಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಿಕ್ಷಣ ಸಚಿವ ಸುರೇಶ್​ ಕುಮಾರ್ ಈ ಕುರಿತು ಟ್ವೀಟ್ ಸಹ ಮಾಡಿದ್ದಾರೆ. ​

ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನರ್ಸರಿ, ಎಲ್​ಕೆಜಿ ಮತ್ತು ಯುಕೆಜಿ ಮಕ್ಕಳಿಗೂ ರಜೆ ನೀಡಲಾಗಿದೆ. ಮುಂದಿನ ಆದೇಶದವರೆಗೆ ರಜೆ ಮುಂದುವರಿಯಲಿದೆ.

Comments are closed.