ಕರ್ನಾಟಕ

ರಾಜ್ಯದ ವಿದ್ಯಾರ್ಥಿನಿಗೆ ಕೊರೋನಾ ಸೋಂಕು, ಪಾಲಕರಿಗೆ ಶಾಲೆಯಿಂದ ಇ-ಮೇಲ್

Pinterest LinkedIn Tumblr


ಬೆಂಗಳೂರು: ನಮ್ಮ ಶಾಲೆಯ ವಿದ್ಯಾರ್ಥಿಯೊಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿದೆ. ಹೀಗಾಗಿ, ಶಾಲೆಗೆ ರಜೆ ಘೋಷಿಸಲಾಗಿದೆ ಎಂದು ವಿದ್ಯಾರ್ಥಿಗಳ ಪಾಲಕರಿಗೆ ಇ-ಮೇಲ್ ಕಳುಹಿಸಿದ ವೈಟ್ ಫೀಲ್ಡ್ ನಲ್ಲಿರುವ ಖಾಸಗಿ ಶಾಲೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಆರೋಗ್ಯ ಇಲಾಖೆಗೆ ಮಾಹಿತಿ ನೀಡುವುದಕ್ಕೆ ಮೊದಲೇ ಪಾಲಕರಿಗೆ ಇ-ಮೇಲ್ ಕಳುಹಿಸಿ ಶಾಲೆಗೆ ರಜೆ ಘೋಷಿಸಲಾಗಿತ್ತು. ಈ ಕುರಿತು ಕಾರಣ ನೀಡುವಂತೆ ಶಾಲೆಗೆ ನೋಟಿಸ್ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಸೋಂಕು ಇರುವ ಟೆಕ್ಕಿ ೧೩ ವರ್ಷದ ಪುತ್ರಿಗೂ ಸೋಂಕು ಕಾಣಿಸಿಕೊಂಡಿದೆ.

ವಿಶ್ವಾದ್ಯಂತ ಸಾವಿನ ಭೀತಿ ಸೃಷ್ಟಿಸಿದ್ದ ಕೊರೋನಾ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ಈಗಾಗಲೇ 22 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರಿನಲ್ಲಿ ರಾಜ್ಯದ ಮೊದಲ ಕೊರೋನಾ ಸೋಂಕಿತ ಪ್ರಕರಣ ದೃಢಪಟ್ಟಿದ್ದು, ಆ ವ್ಯಕ್ತಿಗೆ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ನಲ್ಲಿರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನ ವೈಟ್ಫೀಲ್ಡ್ ಮೂಲದ ಟೆಕ್ಕಿಗೆ ಕೊರೋನಾ ವೈರಸ್ ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಮೊದಲ ಕೊರೋನಾ ಕೇಸ್ ದಾಖಲಾಗಿದೆ.

Comments are closed.