ಕರ್ನಾಟಕ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆ

Pinterest LinkedIn Tumblr


ಬೆಂಗಳೂರು:ದೇಶದಲ್ಲಿ ಕೊರೊನ ವೈರಸ್ ಸೋಂಕಿತರ ಸಂಖ್ಯೆ ಏರುತ್ತಿರುವ ನಡುವೆಯೇ ರಾಜ್ಯದಲ್ಲಿಯೂ ಇದೀಗ ಕೊರೊನಾ ಸೋಂಕಿತರ ಸಂಖ್ಯೆ 8ಕ್ಕೆ ಏರಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಇಂದು ಕೂಡಾ ಒಂದು ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 8ಕ್ಕೆ ಏರಿದಂತಾಗಿದೆ.

ಕಲಬುರಗಿಯಲ್ಲಿ ಶನಿವಾರ ಮತ್ತೊಂದು ಪ್ರಕರಣ ಪತ್ತೆಯಾಗುವ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 7ಕ್ಕೆ ಏರಿತ್ತು. ಇದೀಗ 8ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಸುಧಾಕರ್ ತಿಳಿಸಿದ್ದಾರೆ.

ಅಮೆರಿಕದಿಂದ ಬಂದಿದ್ದ ವ್ಯಕ್ತಿಯ ಸಹೋದ್ಯೋಗಿಯನ್ನು ಪರೀಕ್ಷಿಸಿದಾಗ ಕೊರೊನಾ ವೈರಸ್ ಸೋಂಕು ಪಾಸಿಟಿವ್ ವರದಿ ಬಂದಿದ್ದು, ಆ ವ್ಯಕ್ತಿಯನ್ನು ಪ್ರತ್ಯೇಕವಾಗಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವಿವರಿಸಿದರು.

Comments are closed.