ಕರ್ನಾಟಕ

ರಾಜ್ಯದಲ್ಲಿ ಒಂದೇ ದಿನ 7 ಹೊಸ ಕೊರೊನಾ ಸೋಂಕಿತರ ಪ್ರಕರಣ ಪತ್ತೆ: ಮೂರನೇ ಸ್ಥಾನದಲ್ಲಿ ಕರ್ನಾಟಕ

Pinterest LinkedIn Tumblr


ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ 7 ಹೊಸ ಪ್ರಕರಣ ಪತ್ತೆಯಾಗಿದ್ದು, ಜನರು ಇನ್ನಷ್ಟು ಆತಂಕಗೊಂಡಿದ್ದಾರೆ.

ನಿನ್ನೆ ಹೊಸ 7 ಪ್ರಕರಣ ಪತ್ತೆಯಾದ ಹಿನ್ನೆಲೆ ಕರ್ನಾಟಕದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 33ಕ್ಕೆ ಏರಿದೆ. ದೇಶಾದ್ಯಂತ ಒಟ್ಟು 415 ಕೊರೊನಾ ಪ್ರಕರಣ ಪತ್ತೆಯಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರದ ವೈಬ್‍ಸೈಟ್‍ನಲ್ಲಿ ಈ ಸುದ್ದಿ ಪ್ರಕಟವಾಗಿದ್ದು, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದರು. ಸೋಂಕಿತರಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದ್ದು, ಮೊದಲ ಸ್ಥಾನ ದೆಹಲಿ ಹಾಗೂ ಎರಡನೇ ಸ್ಥಾನದಲ್ಲಿ ಮಹಾರಾಷ್ಟ್ರ ಇದೆ.

ಕರ್ನಾಟಕ ನಾಳೆ ಸಂಪೂರ್ಣ ಲಾಕ್‍ಡೌನ್ ಆಗುವ ಸಾಧ್ಯತೆಗಳಿವೆ ಎಂದು ಶ್ರೀರಾಮುಲು ಅವರು ಮುನ್ಸೂಚನೆ ನೀಡಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ನಾಳೆ ನಿರ್ಧಾರ ಕೈಗೊಳ್ಳಲಿದೆ. ಶಾಸಕರು ಕೂಡ ತಮ್ಮ ತಮ್ಮ ಸ್ವಗ್ರಾಮಕ್ಕೆ ಹೋಗುತ್ತಿದ್ದಾರೆ.

Comments are closed.