ಕರ್ನಾಟಕ

ಚಿಕ್ಕಬಳ್ಳಾಪುರ: ಮತ್ತೊಂದು ಕೊರೋನಾ ಪ್ರಕರಣ ಪತ್ತೆ! ಒಂದೇ ಕುಟುಂಬದ ಮೂವರಲ್ಲಿ ಸೋಂಕು ದೃಢ

Pinterest LinkedIn Tumblr


ಚಿಕ್ಕಬಳ್ಳಾಪುರ :ಜಿಲ್ಲೆಯಲ್ಲಿ ಮತ್ತೊಂದು ಮಾರಕ ಕೋವಿಡ್ 19 ಸೋಂಕು ದೃಢಪಟ್ಟಿದ್ದು ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಮೂರಕ್ಕೆ ಏರಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್. ಲತಾ ದೃಢಪಡಿಸಿದ್ದಾರೆ.

ಕೋವಿಡ್ 19 ಮಾರಕ ಸೋಂಕು ದೇಶದೆಲ್ಲಡೆ ತಲ್ಲಣ ಸೃಷ್ಟಿ ಮಾಡುತ್ತಿದ್ದು ಇದೀಗ ಕರ್ನಾಟಕದಲ್ಲೂ ಜನರ ನಿದ್ದೆಗೆಡಿಸಿದೆ.

ರಾಜ್ಯ ಸರಕಾರ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಲಾಕ್ ಡೌನ್ ಘೋಷಣೆ ಮಾಡಿದರೂ, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.

ಕಳೆದ ಕೆಲವು ದಿನಗಳ ಹಿಂದೆ ಗೌರಿಬಿದನೂರು ತಾಲೂಕಿನ ಒಂದೇ ಕುಟುಂಬದ ಇಬ್ಬರು ವ್ಯಕ್ತಿಗಳಲ್ಲಿ ಸೋಂಕು ಪತ್ತೆಯಾಗಿತ್ತು ಇಂದು ಅದೇ ಕುಟುಂಬದ ಇನ್ನೋರ್ವ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದ್ದು ಅವರನ್ನು ಐಸೋಲೇಷನ್ ವಾರ್ಡಿನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದ್ದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Comments are closed.