
ತುಮಕೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಎರಡಕ್ಕೇರಿದೆ. ಇತ್ತೀಚೆಗೆ ಸೋಂಕು ಪತ್ತೆಯಾಗಿ ಸಾವನ್ನಪ್ಪಿದ್ದ ವೃದ್ಧನ 13 ವರ್ಷದ ಮಗನಿಗೆ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ರಾಕೇಶ್ ಕುಮಾರ್ ಹೇಳಿದ್ದಾರೆ.
ಈತನನ್ನು ಸೋಂಕಿತ ನಂ.84 ಎಂದು ಗುರುತಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಇಂದಿರಾ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಜೊತೆಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಇತರರ ವರದಿಗಳು ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ಮೊದಲ ಸೋಂಕಿತ ವ್ಯಕ್ತಿ ಸೋಂಕು ಪತ್ತೆಗೆ ಮೊದಲು ತಿಪಟೂರಿಗೆ ಪ್ರಯಾಣಿಸಿದ್ದರು. ಅಲ್ಲಿ ಅವರ ಸಂಪರ್ಕಕ್ಕೆ ಬಂದ 11 ಜನರನ್ನು ಪ್ರಾಥಮಿಕ ಸಂಪರ್ಕಿತರೆಂದು ಗುರುತಿಸಿದ್ದು, ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಇನ್ನೂ 30 ಜನರ ವರದಿ ಬರಲು ಬಾಕಿಯಿದೆ. ಶಿರಾ ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಲಾಗುವುದು. ಅಗತ್ಯ ವಸ್ತುಗಳನ್ನು ಮನೆ ಮನೆಗೆ ಪೂರೈಸಲು ವ್ಯವಸ್ಥೆ ಮಾಡಲಾಗಿದೆ. ತಿಪಟೂರು ಪಟ್ಟಣದ ಮೇಲೂ ಕಣ್ಣಿಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ಧಾರೆ.
Comments are closed.