ಕರ್ನಾಟಕ

ಬೆಳಗಾವಿಯಲ್ಲಿ ಮತ್ತೇ 4 ಜನರಿಗೆ ಕೊರೊನಾ ಪಾಸಿಟಿವ್: ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆ!

Pinterest LinkedIn Tumblr


ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಇಂದು ಭಾನುವಾರ ಮತ್ತೇ ನಾಲ್ಕು ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಈ ನಾಲ್ಕು ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 14ಕ್ಕೆ ಏರಿದಂತಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದಿನ ಪತ್ರಿಕಾ ಪ್ರಕಟಣೆಯ ಪ್ರಕಾರ ನಾಲ್ಕು ಜನರಲ್ಲಿ ಸೋಂಕು ಪತ್ತೆಯಾಗಿದೆ.

ಬೆಳಗಾವಿ ಜಿಲ್ಲೆ ರಾಯಬಾಗ ತಾಲ್ಲೂಕಿನ 19 ವರ್ಷದ ವ್ಯಕ್ತಿ (ಪಿ-223); 55 ವರ್ಷದ ವ್ಯಕ್ತಿ (ಪಿ-225); 25 ವರ್ಷದ ಯುವಕ(ಪಿ-226)ನಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂವರೂ ಕೂಡ ಈಗಾಗಲೇ ಸೋಂಕಿತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಿ-150ರ ಜೊತೆ ಸಂಪರ್ಕಕ್ಕೆ ಬಂದಿದ್ದರು.

ಅದೇ ರೀತಿ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ 38 ವರ್ಷದ ವ್ಯಕ್ತಿ (ಪಿ-224)ಯಲ್ಲೂ ಸೋಂಕು ದೃಢಪಟ್ಟಿದ್ದು, ಇವರು ಪಿ-128 ಜೊತೆ ಸಂಪರ್ಕಕ್ಕೆ ಬಂದಿದ್ದರು ಎಂದು ಆರೋಗ್ಯ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ,

Comments are closed.