ಕರ್ನಾಟಕ

ಲಾಕ್‌ಡೌನ್: ಕೆಲಸಕ್ಕೆ ಹಾಜರಾಗಲು ಸರ್ಕಾರಿ ನೌಕರರಿಗೆ ಸುತ್ತೋಲೆ

Pinterest LinkedIn Tumblr


ಬೆಂಗಳೂರು: ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ರಜೆಯಲ್ಲಿದ್ದ ಸರ್ಕಾರಿ ಇಲಾಖೆಯ ಸಿಬ್ಬಂದಿಗೆ ಕೆಲಸಕ್ಕೆ ಹಾಜರಾಗಲು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್ ಸುತ್ತೋಲೆ ಹೊರಡಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ನೌಕಕರಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು. ಇದೀಗ 21 ದಿನಗಳ ಕಾಲದ ಲಾಕ್‌ಡೌನ್ ಅವಧಿ ವಿಸ್ತರಣೆಗೊಂಡಿದೆ. ಮೇ, 3 ರ ವರೆಗೆ ಒಟ್ಟು 19 ದಿನಗಳ ಕಾಲ ಲಾಕ್‌ಡೌನ್ ಜಾರಿಯಲ್ಲಿರಲಿದೆ.

ಈ ನಡುವೆ ಸರ್ಕಾರ ಕೆಲಸ ಕಾರ್ಯಗಳು ಸರಾಗವಾಗಿ ನಡೆಯುವ ಉದ್ದೇಶದಿಂದಾಗಿ 14 ಇಲಾಖೆಯಗಳ ನೌಕರರು ಕೆಲಸಕ್ಕೆ ಹಾಜರಾಗುವಂತೆ ಸರ್ಕಾರ ಸೂಚನೆ ನೀಡಿದೆ.

ಸಚಿವಾಲಯ ಸೇರಿದಂತೆ ರಾಜ್ಯಮಟ್ಟದ ಕಚೇರಿಗಳಲ್ಲಿ ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಕಂದಾಯ ಇಲಾಖೆ, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಾರಿಗೆ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಇಂಧನ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸಿಬ್ಬಂದಿಗೆ ಕೆಲಸಕ್ಕೆ ಹಾಜರಾಗುವಂತೆ ಸುತ್ತೋಲೆ ಹೊರಡಿಸಲಾಗಿದೆ.

ಅಲ್ಲದೆ ರಾಜ್ಯದಲ್ಲಿರುವ ಎಲ್ಲಾ ಖಜಾನೆಗಳನ್ನು ಸೇರಿದಂತೆ ಆರ್ಥಿಕ ಇಲಾಖೆ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಮತ್ತು ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ವರ್ಗದ ಅಧಿಕಾರಿ ಹಾಗೂ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

Comments are closed.