ಮಡಿಕೇರಿ: ಕೊವಿದ್ -19 ನಿಂದ ಗುಣಮುಖನಾಗಿ ಮನೆಗೆ ಮರಳಿದ್ದ ವಿರಾಜಪೇಟೆ ಸಮೀಪದ ಕೆಟುಮೊಟ್ಟೆ ನಿವಾಸಿ ಜ್ವರದ ಕಾರಣ ಬುಧವಾರ ಮಧ್ಯಾಹ್ನ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಆಸ್ಪತ್ರೆಗೆ ತಾನಾಗಿಯೇ ದಾಖಲಾದ ವ್ಯಕ್ತಿ ಕೋವಿಡ್ -19 ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನ ಗಂಟಲು ದ್ರವ ಮತ್ತು ರಕ್ತದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಪರೀಕ್ಷಾ ವರದಿ ಗುರುವಾರ ಬೆಳಿಗ್ಗೆ ವೇಳೆಗೆ ಹೊರಬರುವ ಸಾಧ್ಯತೆ ಇದೆ.
ಏಪ್ರಿಲ್ 7 ರಂದು ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ವ್ಯಕ್ತಿ ಮನೆಯಲ್ಲೇ ಇದ್ದರು. ಒಂದು ವಾರದ ನಂತರ ಆತನಲ್ಲಿ ಮತ್ತೆ ಜ್ವರ ಕಾಣಿಸಿಕೊಂಡಿದೆ. ವ್ಯಕ್ತಿಯು ತನ್ನ ಮನೆಯಿಂದ ಹೊರಹೋಗಿಲ್ಲವಾದ್ದರಿಂದ ಜನರು ಭಯಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಅನಿಸ್ ಕಣ್ಮಣಿ ಜಾಯ್ ಹೇಳಿದ್ದಾರೆ.
Comments are closed.