ಕರ್ನಾಟಕ

ರಾಜ್ಯದಲ್ಲಿ 10 ಮಂದಿಗೆ ಕೊರೋನಾ: ಸೋಂಕಿತರ ಸಂಖ್ಯೆ 418ಕ್ಕೇರಿಕೆ

Pinterest LinkedIn Tumblr


ಬೆಂಗಳೂರು(ಏ.21): ಕರ್ನಾಟಕದಲ್ಲಿ ಮಂಗಳವಾರದಂದು 10 ಕೋವಿಡ್​​-19 ಪಾಸಿಟಿವ್​​ ಪ್ರಕರಣಗಳು ಪತ್ತೆಯಾಗಿವೆ. 3 ಕಲಬುರಗಿ, 3 ವಿಜಯಪುರ, 2 ಮೈಸೂರು, 1 ಬೆಳಗಾವಿ ಮತ್ತು ದಕ್ಷಿಣ ಕನ್ನಡ ಒಬ್ಬರಿಗೆ ಕೊರೋನ ಸೋಂಕು ಪತ್ತೆಯಾಗಿದೆ. ಹೀಗಾಗಿ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 418ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್ ಪ್ರಕಾರ, ಇಂದು 2,773 ಜನರನ್ನು ಕೊರೋನಾ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 2,725 ಕೋರೋನಾ ನೆಗೆಟಿವ್ ಆಗಿದೆ. ಉಳಿದ 10 ಜನರಿಗೆ ಕೊರೋನಾ ಸೋಂಕು ಪಾಸಿಟಿವ್​​​​ ಕಂಡು ಬಂದಿದೆ.

ಇನ್ನು, ಕಲಬುರಗಿಯ 80 ವರ್ಷದ ವೃದ್ದನೋರ್ವ ಇಂದು ಬೆಳಿಗ್ಗೆ ಮೃತಪಟ್ಟಿದ್ದರು. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದವರ ಸಂಖ್ಯೆ 17ಕ್ಕೆ ಏರಿದೆ. ಜತೆಗೆ 418 ಜನರ ಪೈಕಿ 129 ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದೇಶಾದ್ಯಂತ ಕೋವಿಡ್-19 ವೈರಸ್ ಅಟ್ಟಹಾಸ ಮತ್ತಷ್ಟು ತೀವ್ರಗೊಂಡಿದೆ. ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಕಂಗೆಡಿಸಿದೆ. ಭಾರತದಲ್ಲಿ ಮೃತರ ಸಂಖ್ಯೆ 503ಕ್ಕೇರಿರುವುದು ಆತಂಕಕಾರಿಯಾಗಿದೆ. ಮತ್ತೊಂದಡೆ 18,985 ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ ಇದೆ.

Comments are closed.