ಕರ್ನಾಟಕ

ರಾಜ್ಯದಲ್ಲಿ ಗುರುವಾರ ಮತ್ತೆ 22 ಹೊಸ ಕೊರೋನಾ ಪ್ರಕರಣ ಬೆಳಕಿಗೆ; ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆ

Pinterest LinkedIn Tumblr

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಗುರುವಾರ ಮತ್ತೆ 22 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ಇದರಂತೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬುಧವಾರ ಸಂಜೆ 5 ಗಂಟೆಯಿಂದ ಇಂದು ಮಧ್ಯಾಹ್ನ 12ರವರೆಗೆ ಒಟ್ಟು 22 ಪ್ರಕರಣಗಳು ಬೆಳಕಿಗೆ ಬಂದಿದ್ದು, ಮಹಾಮಾರಿ ವೈರಸ್’ಗೆ ಈ ವರೆಗೂ 21 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, ಸೋಂಕಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ 223 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1, ವಿಜಯಪುರ 2, ಬೆಳಗಾವಿ 14, ತುಮಕೂರು 1, ಬೆಂಗಳೂರು ನಗರ 3 ಹಾಗೂ ದಾವಣಗೆರೆಯಲ್ಲಿ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ 58 ವರ್ಷದ ಮಹಿಳೆ, ವಿಜಯಪುರದ 62 ವರ್ಷದ ವ್ಯಕ್ತಿ ಮತ್ತು 33 ವರ್ಷದ ಮಹಿಳೆ, ತುಮಕೂರಿನ 65 ವರ್ಷದ ಮಹಿಳೆ, ಬೆಂಗಳೂರು ನಗರದ 20 ಹಾಗೂ 28 ವರ್ಷದ ಯುವಕರು, 63 ವರ್ಷದ ವೃದ್ಧ ಮತ್ತು ದಾವಣಗೆರೆಯ 69 ವರ್ಷದ ವ್ಯಕ್ತಿ ಸೋಂಕಿಗೆ ಗುರಿಯಾಗಿದ್ದಾರೆ.

ಉಳಿದಂತೆ ಬೆಳಗಾವಿಯ ಹಿರೇಬಾಗೇವಾಡಿಯ 24 ವರ್ಷದ ಇಬ್ಬರು ಮಹಿಳೆಯರು, 27 ವರ್ಷದ ವ್ಯಕ್ತಿ, 18 ವರ್ಷದ ಯುವಕ, 48 ವರ್ಷದ ಮಹಿಳೆ , 50 ವರ್ಷದ ವ್ಯಕ್ತಿ, 27 ವರ್ಷದ ಮಹಿಳೆ, 43, 16, 36 ವರ್ಷದ ವ್ಯಕ್ತಿಗಳು, 8 ವರ್ಷದ ಬಾಲಕ, 36 ವರ್ಷದ ವ್ಯಕ್ತಿ, ಬೆಳಗಾವಿ ಹುಕ್ಕೇರಿಯ 9 ವರ್ಷದ ಬಾಲಕ ಮತ್ತು 75 ವರ್ಷದ ವೃದ್ಧೆಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Comments are closed.