ಬೆಂಗಳೂರು(ಮೇ.2): ಬಿಗಿಯಾದ ಲಾಕ್ಡೌನ್ ನಡುವೆಯೂ ರಾಜ್ಯದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರಿದಿದೆ. ಇಂದು ಒಂದೇ ದಿನ ರಾಜ್ಯದ ವಿವಿಧ ಭಾಗಗಳಲ್ಲಿ 12 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟ ಸೋಂಕಿತರ ಸಂಖ್ಯೆ 601ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ರಾಜ್ಯ ಸರ್ಕಾರ ಪ್ರಕಾರದ, ಇಂದು ಬೆಂಗಳೂರು 4, ವಿಜಯಪುರ 2, ತುಮಕೂರು 2, ಬಾಗಲಕೋಟೆ 1, ಬೆಳಗಾವಿ 1, ಬೀದರ್ 1, ಚಿಕ್ಕಬಳ್ಳಾಪುರದಲ್ಲಿ ಒಬ್ಬರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಜತೆಗೆ ಕಳೆದ 24 ಗಂಟೆಗಳಲ್ಲಿ 3 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇದರ ಪರಿಣಾಮ ಮೃತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಇನ್ನು, ಒಟ್ಟು 601 ಸೋಂಕಿತರ ಪೈಕಿ 271 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 304 ಮಂದಿಗೆ ಪ್ರತ್ಯೇಕ ಆಸ್ಪತ್ರೆಗಳಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಏನೇ ಕ್ರಮ ತೆಗೆದುಕೊಳ್ಳುತ್ತಿದ್ದರೂ, ದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಅದರಲ್ಲಿಯೂ ನಿನ್ನೆಯಿಂದ ಇದುವರೆಗೆ ಅತೀಹೆಚ್ಚು ಕೇಸ್‌ಗಳು ಪತ್ತೆಯಾಗಿವೆ. ಒಂದೇ ದಿನ ಭಾರತದಲ್ಲಿ ಬರೋಬ್ಬರಿ 2293 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ನಿನ್ನೆಗೆ ಕೊರೊನಾ ಸೋಂಕಿತರ ಸಂಖ್ಯೆ 37,336 ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
Comments are closed.