ಕರ್ನಾಟಕ

ಬೆಳಗಾವಿ ಜಿಲ್ಲಾಧಿಕಾರಿಗಳ ಬಂಗಲೆಯಲ್ಲಿ ಕರ್ತವ್ಯದಲ್ಲಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌ ಪೇದೆ

Pinterest LinkedIn Tumblr

ಬೆಳಗಾವಿ: ನಗರದಲ್ಲಿ ಕರ್ತವ್ಯ ನಿರತ ಪೊಲೀಸ್‌ ಪೇದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ನಗರ ಸಶಸ್ತ್ರ ಮೀಸಲು ಪಡೆಯ ಪ್ರಕಾಶ್ ಗುರವನ್ನವರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಳಗಾವಿ ನಗರ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಪೇದೆ 32 ವರ್ಷದ ಪ್ರಕಾಶ್ ಗುರವನ್ನವರ್ ನಗರದ ಜಿಲ್ಲಾಧಿಕಾರಿಗಳ ಬಂಗಲೆಯಲ್ಲಿ ಕರ್ತವ್ಯದಲ್ಲಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೇ 6, 2020ರ ಬುಧವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ.

ಈ ಸಂಬಂಧ ನಗರ ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳು‌ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪೊಲೀಸ್‌ ಪೇದೆ ಪ್ರಕಾಶ್ ಗುರವನ್ನವರ್ ಆತ್ಮಹತ್ಯೆ ಸಂಬಂಧ ಪ್ರಕರಣ‌ ದಾಖಲಾಗಿದೆ.

Comments are closed.