ಕರ್ನಾಟಕ

500 ಕೋಟಿ ಮೌಲ್ಯದ 2ನೇ ಪ್ಯಾಕೇಜ್‌ ಘೋಷಣೆ ಮಾಡಿದ ಯಡಿಯೂರಪ್ಪ

Pinterest LinkedIn Tumblr


ಬೆಂಗಳೂರು (ಮೇ 15); ರಾಜ್ಯದಲ್ಲಿ ಕುಗ್ಗಿರುವ ಆರ್ಥಿಕತೆಗೆ ಉತ್ತೇಜನ ನೀಡುವ ಸಲುವಾಗಿ ಕಳೆದ ವಾರ 1,610 ಕೋಟಿ ರೂ ಮೌಲ್ಯದ ವಿಶೇಷ ಪ್ಯಾಕೇಜ್ ಘೋಷಿಸಿದ್ದ ಬಿಎಸ್‌ ಯಡಿಯೂರಪ್ಪ ಇಂದು 500 ಕೋಟಿ ಮೌಲ್ಯದ ಮತ್ತೊಂದು ಪ್ಯಾಕೇಜ್ ಘೋಷಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ಕರೆದು ವಿಶೇಷ ಪ್ಯಾಕೇಜ್‌ ಘೋಷಿಸಿರುವ ಬಿ.ಎಸ್.‌ ಯಡಿಯೂರಪ್ಪ ಮೆಕ್ಕೆಜೋಳ ಬೆಳೆದ ರೈತರಿಗೆ ಬಂಪರ್‌ ಕೊಡುಗೆ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, “ರಾಜ್ಯದಲ್ಲಿ ಸುಮಾರು 10 ಲಕ್ಷಕ್ಕೂ ಅಧಿಕ ಮೆಕ್ಕೆಜೋಳ ರೈತರಿದ್ದಾರೆ. ಇವರ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಿ ಸರ್ಕಾರವೇ ಖರೀದಿಸಲು ಮುಂದಾಗಿದೆ” ಎಂದು ಆಶ್ವಾಸನೆ ನೀಡಿದ್ದಾರೆ.

ಇದಲ್ಲದೆ, “ಈ ಹಿಂದೆ ನೈಸರ್ಗಿಕ ವಿಕೋಪ ಮತ್ತು ಅಪಘಾತದಿಂದ ಕುರಿ ಮೇಕೆ ಸತ್ತರೆ ರೈತರಿಗೆ 5,000 ರೂ ಪರಿಹಾರ ನೀಡಲಾಗುತ್ತಿತ್ತು. ಈ ಯೋಜನೆಯನ್ನು ಹಾಗೆ ಮುಂದುವರಿಸಲು ರಾಜ್ಯ ಸರ್ಕಾರ ಮುಂದಾಗಿದೆ” ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಿಗೂ ಬಂಪರ್ ಕೊಡುಗೆ ನೀಡಲು ಮುಂದಾಗಿರುವ ಯಡಿಯೂರಪ್ಪ, ಕೊರೋನಾ ಕಾಲದಲ್ಲಿ ರಾಜ್ಯಾದ್ಯಂತ ಸೇವೆ ಸಲ್ಲಿಸಿರುವ ಆಶಾ ಕಾರ್ಯಕರ್ತೆಯರಿಗೆ 3,000 ಮಾಸಿಕ ಧನ ನೀಡಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಸುಮಾರು 40,260 ಜನ ಆಶಾ ಕಾರ್ಯಕರ್ತೆಯರಿದ್ದು ಎಲ್ಲರಿಗೂ ಹಣ ತಲುಪಿಸಲಾಗುವುದು. ಇದಕ್ಕೆಂದು 12.5 ಕೋಟಿ ಮೀಸಲಿಡಲಾಗಿದೆ” ಎಂದು ಬಿ.ಎಸ್. ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

Comments are closed.