ಕರ್ನಾಟಕ

ರಾಜ್ಯದಲ್ಲಿ ಕೊರೋನಾಗೆ ಮತ್ತೊಂದು ಬಲಿ, ಒಂದೇ ದಿನ 69 ಪಾಸಿಟಿವ್ ಪ್ರಕರಣಗಳು ಪತ್ತೆ

Pinterest LinkedIn Tumblr


ಬೆಂಗಳೂರು: ಕರ್ನಾಟಕದಲ್ಲಿ ಮಹಾಮಾರಿ ಕೊರೋನಾ ವೈರಸ್ ಗೆ ಬೀದರ್ ನಲ್ಲಿ ಮತ್ತೊಂದು ಬಲಿಯಾಗಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.

ಇನ್ನು ಸೋಂಕಿತರ ಸಂಖ್ಯೆಯೂ ಶುಕ್ರವಾರ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಒಂದೇ ದಿನವೇ ಬರೋಬ್ಬರಿ 69 ಮಂದಿಗೆ ಪಾಸಿಟಿವ್ ದೃಢುಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1056ಕ್ಕೆ ಏರಿಕೆಯಾಗಿದೆ.

ಈ ನಡುವೆ ಬೀದರ್ ಜಿಲ್ಲೆಯ ಚಿಟಗುಪ್ಪ ಪಟ್ಟಣದ 52 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದರು. ಇವರು ಮೇ 12ರಂದು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೇ12ರಂದು ಮೃತಪಟ್ಟಿದ್ದಾರೆ. ಅವರ ತಪಾಸಣಾ ವರದಿಯಲ್ಲಿ ಕೊರೋನಾ ಸೋಂಕು ಇದ್ದಿದ್ದು ಇಂದು ದೃಢಪಟ್ಟಿದೆ.

ವಿದೇಶದಿಂದ ದಕ್ಷಿಣ ಕನ್ನಡ ಮತ್ತು ಉಡುಪಿಗೆ ಆಗಮಿಸಿದ 20 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15, ಉಡುಪಿಯಲ್ಲಿ 5, ಪ್ರಕರಣಗಳು, ಮಂಡ್ಯದಲ್ಲಿ 13, ಬೆಂಗಳೂರು ನಗರದಲ್ಲಿ 13, ಹಾಸನದಲ್ಲಿ 5, ಬೀದರ್ ನಲ್ಲಿ 7, ಕೋಲಾರದಲ್ಲಿ 1, ಚಿತ್ರದುರ್ಗದಲ್ಲಿ 2, ಶಿವಮೊಗ್ಗದಲ್ಲಿ 1, ಹಾಸನದಲ್ಲಿ 3, ಬಾಗಲಕೋಟೆಯಲ್ಲಿ 1 ಹಾಗೂ ಕಲಬುರಗಿಯಲ್ಲಿ 3 ಪ್ರಕರಣಗಳು ಪತ್ತೆಯಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಬೈನಿಂದ ಮರಳಿರುವ ವ್ಯಕ್ತಿಗಳಲ್ಲಿ ಸೋಂಕು ಪತ್ತೆಯಾಗಿದೆ. ಚಿತ್ರದುರ್ಗ, ಶಿವಮೊಗ್ಗ, ಹಾಸನದಲ್ಲಿ ಮುಂಬೈನಿಂದ ಮರಳಿದ ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟಿದೆ. ಕೋಲಾರ ಮತ್ತು ಚಿತ್ರದುರ್ಗದಲ್ಲಿ ಚೆನ್ನೈನಿಂದ ಮರಳಿದ ಹಾಗೂ ಉಡುಪಿಗೆ ದುಬೈನಿಂದ ಮರಳಿದ ವ್ಯಕ್ತಿಗಳಲ್ಲಿ ಸೋಂಕು ಕಂಡುಬಂದಿದೆ. ಇತರ ಜಿಲ್ಲೆಗಳಲ್ಲಿ ಸೋಂಕಿತರ ಸಂಪರ್ಕಕ್ಕೆ ಬಂದರಲ್ಲಿ ಕೂಡ ಸೋಂಕು ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 68 ವರ್ಷದ ಮಹಿಳೆಗೆ ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರಲ್ಲಿ ಕೂಡ ಸೋಂಕು ಕಂಡುಬಂದಿದೆ.

ರಾಜ್ಯದಲ್ಲಿ ಒಟ್ಟು 539 ಪ್ರಕರಣಗಳು ಸಕ್ರಿಯವಾಗಿದ್ದು, 480 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ 36 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ನಡುವೆ ಮೈಸೂರು ನಗರದಲ್ಲಿ ಸೋಂಕಿತರಾಗಿದ್ದ 88 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ಮಾಹಿತಿ ನೀಡಿದೆ.

Comments are closed.