ಕರ್ನಾಟಕ

ಕೊರೊನಾ ಹರಡದಂತೆ ಎವರ್ ಗ್ರೀನ್ ಚಾಮರಾಜನಗರ ಅಭಿಯಾನ

Pinterest LinkedIn Tumblr


ಚಾಮರಾಜನಗರ: ರಾಜ್ಯದ ಎಲ್ಲೆಡೆ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದೆ. ಹಸಿರು ವಲಯದಲ್ಲಿದ್ದ ಹಲವು ಜಿಲ್ಲೆಗಳಿಗೂ ಈಗ ಕೊರೊನಾ ವಕ್ಕರಿಸಿದೆ. ಈ ಹಿನ್ನೆಲೆಯಲ್ಲಿ ಇದುವರೆಗೂ ಯಾವುದೇ ಸೋಂಕು ತಗಲುದೆ ಸುರಕ್ಷಿತವಾಗಿರುವ ಚಾಮರಾಜನಗರ ಜಿಲ್ಲೆಯನ್ನು ಹಸಿರು ವಲಯದಲ್ಲೇ ಉಳಿಸಿಕೊಳ್ಳಲು ಜಿಲ್ಲಾಡಳಿತ ಎವರ್ ಗ್ರೀನ್ ಚಾಮರಾಜನಗರ ಅಭಿಯಾನ ಆರಂಭಿಸಿದೆ.

ಕೊರೊನಾ ಸೋಂಕು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವುದು, ಲಾಕ್‍ಡೌನ್ ನಿಯಮಗಳ ಪಾಲನೆ, ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಹೊರಗಿನಿಂದ ಬಂದವರನ್ನು ಗುರುತಿಸಿ ಮಾಹಿತಿ ನೀಡುವುದು ಹೀಗೆ ವಿವಿಧ ಜವಬ್ದಾರಿಗಳನ್ನು ನಿರ್ವಹಿಸಲು ಪ್ರತಿ ಗ್ರಾಮ ಪಂಚಾಯ್ತಿ ಮಟ್ಟದಲ್ಲು ಟಾಸ್ಕ್ ಪೋರ್ಸ್ ರಚಿಸಲಾಗಿದೆ.

ಲಾಕ್‍ಡೌನ್ ನಿಯಮಗಳ ಪಾಲನೆಯ ಬಗ್ಗೆ ನಿಗಾ ವಹಿಸಲು ಈಗಾಗಲೇ ನೇಮಕ ಮಾಡಲಾಗಿರುವ ಸ್ಪೆಷಲ್ ಎಕ್ಸಿಕ್ಯುಟಿವ್ ಮ್ಯಾಜಿಸ್ಟ್ರೇಟ್‍ಗಳಿಗೆ ಮತ್ತಷ್ಟು ಬಲ ನೀಡಲಾಗುವುದು. ಗಡಿಭಾಗಗಳಲ್ಲಿ ಸ್ಥಾಪಿಸಿರುವ 12 ಚೆಕ್‍ಪೋಸ್ಟ್ ಗಳಲ್ಲಿ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳುವುದು ಸೇರಿದಂತೆ ಹತ್ತಾರು ಕ್ರಮಗಳನ್ನು ಜಿಲ್ಲಾಡಳಿತ ಕೈಗೊಡಿದೆ.

ಈ ಅಭಿಯಾನದಲ್ಲಿ ಸಾರ್ವಜನಿಕರು ಕೈಜೋಡಿಸಬೇಕು, ಪ್ರತಿಯೊಬ್ಬರು ಕೊರೊನಾ ವಾರಿಯರ್ಸ್ ಆಗಬೇಕು ಈ ಮೂಲಕ ಎವರ್ ಗ್ರೀನ್ ಚಾಮರಾಜನಗರ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಮನವಿ ಮಾಡಿಕೊಂಡಿದ್ದಾರೆ.

Comments are closed.