ಕರ್ನಾಟಕ

ಕಾರ್ಮಿಕರ ಕೆಲಸದ ಅವಧಿ 8ರ ಬದಲು 10 ಗಂಟೆ ಕೆಲಸ ಕಡ್ಡಾಯ ಮಾಡಿದ ರಾಜ್ಯ ಸರ್ಕಾರ

Pinterest LinkedIn Tumblr


ಬೆಂಗಳೂರು (ಮೇ 22);ಲಾಕ್‌ಡೌನ್‌ನಿಂದ ಉಂಟಾಗಿರುವ ಉತ್ಪಾದನೆ ಮತ್ತು ಕಾರ್ಮಿಕರ ಕೊರೆತೆಯನ್ನು ನೀಗಿಸುವ ಸಲುವಾಗಿ ಕಾರ್ಮಿಕರನ್ನು ಕಾರ್ಖಾನೆಗಳಲ್ಲಿ 8 ಗಂಟೆ ಬದಲಿಗೆ 12 ಗಂಟೆ ದುಡಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರ ಅನುಮತಿ ನೀಡಿದ ಬೆನ್ನಿಗೆ ಇಂದು ಕರ್ನಾಟಕ ಸರ್ಕಾರ ಸಹ ಕಾರ್ಮಿಕರ ಕೆಲಸದ ಅವಧಿಯನ್ನು 10 ಗಂಟೆಗೆ ಏರಿಸಿ ಆದೇಶ ಹೊರಡಿಸಿದೆ.

ಕಳೆದ ಎರಡು ತಿಂಗಳಿನಿಂದ ರಾಷ್ಟ್ರದಾದ್ಯಂತ ಲಾಕ್‌ಡೌನ್ ಜಾರಿಯಲ್ಲಿದೆ. ಹೀಗಾಗಿ ಕಾರ್ಖಾನೆಗಳನ್ನು ಮುಚ್ಚಲ್ಪಟ್ಟಿದ್ದು ಉತ್ಪಾದನಾ ವಲಯ ಬಹುತೇಕ ಸ್ಥಗಿತವಾಗಿದೆ. ಹೀಗಾಗಿ ಲಾಕ್‌ಡೌನ್ ಅವಧಿ ಮುಗಿದ ನಂತರ ಕಾರ್ಮಿಕರನ್ನು 8 ಗಂಟೆ ಬದಲಿಗೆ 12 ಗಂಟೆ ದುಡಿಸಿಕೊಳ್ಳಬೇಕು ಎಂಬ ಮಾತುಗಳು ಕೇಳಿ ಬಂದಿದ್ದವು.

ಅದರಂತೆ ಮಹಾರಾಷ್ಟ್ರ ಸರ್ಕಾರ ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಿಸುತ್ತಿದ್ದಂತೆ, ಕರ್ನಾಟಕ ಸಹ ಇದೇ ನೀತಿಯನ್ನು ಅನುಸರಿಸಿದೆ. ಆದರೆ, ಸರ್ಕಾರದ ಈ ನಿರ್ಧಾರ ಕಾರ್ಮಿಕರ ಸಂಘಟನೆಯವರ ಆಕ್ರೋಶಕ್ಕೆ ಕಾರಣವಾಗಿದೆ.

ಫ್ಯಾಕ್ಟರಿ ಆ್ಯಕ್ಟ್ 1948 ಅಡಿಯಲ್ಲಿ ಆದೇಶ ಹೊರಡಿಸಲಾಗಿದ್ದು, ಸಮಯ ಬದಲಾವಣೆಯನ್ನ ಇಂದಿನಿಂದ ಆಗಸ್ಟ್ ವರೆಗೂ ಮುಂದುವರಿಸುವಂತೆಯೂ ಆದೇಶದಲ್ಲಿ ಸೂಚಿಸಲಾಗಿದೆ. ಇದಲ್ಲದೆ, ಕೆಲ‌ ಷರತ್ತುಗಳನ್ನೂ ವಿಧಿಸಿರುವ ರಾಜ್ಯ ಸರ್ಕಾರ 10 ಗಂಟೆ ಕೆಲಸ ಮಾಡುವವರಿಗೆ ಆಯಾ ಕಂಪನಿಗಳು ಹೆಚ್ಚುವರಿ ಸಂಬಳವನ್ನೂ ನೀಡಬೇಕು ಎಂದು ಆದೇಶಿಸಲಾಗಿದೆ.

Comments are closed.