ಕರ್ನಾಟಕ

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ; ಇಂದು ದಾಖಲೆಯ 196 ಕೊರೋನಾ ಪ್ರಕರಣ ಪತ್ತೆ-ಸೊಂಕಿತರ ಸಂಖ್ಯೆ 1939ಕ್ಕೆ ಏರಿಕೆ!

Pinterest LinkedIn Tumblr

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಏರುತ್ತಿದ್ದು 2 ಸಾವಿರದ ಗಡಿ ತಲುಪಿದೆ. ಶುಕ್ರವಾರ ಸಂಜೆಯಿಂದ ಶನಿವಾರ ಮಧ್ಯಾಹ್ನದವರೆಗೆ 196 ಜನರಲ್ಲಿ ಸೊಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1939ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಿವಾಸಿಯಾಗಿದ್ದ 32 ವರ್ಷದ ವ್ಯಕ್ತಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಇವರು ಮೇ 19ರಂದು ಉಸಿರಾಟದ ತೊಂದರೆಯಿಂದ ನಿಗದಿತ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ದೀರ್ಘಕಾಲೀನ ಕ್ಷಯದಿಂದ ಬಳಲುತ್ತಿದ್ದರು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇವರು ಇಲ್ಲಿಯವರೆಗೆ ರಾಜ್ಯದಲ್ಲಿ ಕೊರೋನದಿಂದ ಮೃತಪಟ್ಟ ಅತಿ ಕಿರಿಯ ರೋಗಿಯಾಗಿದ್ದಾರೆ. ಇದರಿಂದ ಸೋಂಕಿನಿಂದ ಮೃತಪಟ್ಟವರ ಖ್ಯೆ 43 ಕ್ಕೆ ಏರಿಕೆಯಾಗಿದೆ.

ಯಾದಗಿರಿ ಜಿಲ್ಲೆಯೊಂದರಲ್ಲೇ ಬರೋಬ್ಬರಿ 72 ಪ್ರಕರಣಗಳು ಪತ್ತೆಯಾಗಿವೆ.ಗದಗದಲ್ಲಿ 15 ಮಂದಿಗೆ ಸೋಂಕು ತಗುಲಿದೆ, ರಾಯಚೂರಿನಲ್ಲಿ 36 ಪ್ರಕರಣಗಳು ವರದಿಯಾಗಿವೆ.

ಚಿಕ್ಕಬಳ್ಳಾಪುರದಲ್ಲಿ 20, ಮಂಡ್ಯದಲ್ಲಿ 28, ಬೆಂಗಳೂರಿನಲ್ಲಿ 4, ಯಾದಗಿರಿಯಲ್ಲಿ 72, ಗದಗದಲ್ಲಿ 12, ಉತ್ತರ ಕನ್ನಡದಲ್ಲಿ 2, ಹಾಸನದಲ್ಲಿ 3 ಪ್ರಕರಣಗಳು ದೃಢಪಟ್ಟಿವೆ.

ಈ ಪೈಕಿ 184 ಸೋಂಕಿತರಿಗೆ ಮುಂಬೈ ನಂಟಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

Comments are closed.