ಕರ್ನಾಟಕ

ಹಾಸನದಲ್ಲಿ ಪೊಲೀಸರಿಗೆ ಕೊರೋನಾ ದೃಢ: ಕ್ವಾರಂಟೈನ್’ನಲ್ಲಿ 100ಕ್ಕೂ ಹೆಚ್ಚು ಪೊಲೀಸರು

Pinterest LinkedIn Tumblr


ಹಾಸನ: ಪೊಲೀಸ್ ಪೇದೆಯೊಬ್ಬರಲ್ಲಿ ಮಹಾಮಾರಿ ಕೊರೋನಾ ವೈರಸ್ ಇರುವುದು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಹಾಸನದ ಎರಡು ಏರಿಯಾಗಳನ್ನು ಸೀಲ್’ಡೌನ್ ಮಾಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಪೊಲೀಸ್ ಪೇದೆ ಹಾಗೂ ಅರಳಿಕಟ್ಟೆ ಪಕ್ಕದ ರಸ್ತೆಯ ನಿವಾಸಿ ಸೇರಿದಂತೆ ಈ ವರೆಗೂ ಹಾಸದಲ್ಲಿ 14 ಕೊರೋನಾ ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿವೆ.

ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನದ ಉತ್ತರ ಬಡಾವಣೆ ಹಾಗೂ ಇಂದಿರಾನಗರವನ್ನು ಸೀಲ್’ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕೊರೋನಾ ದೃಢಪಟ್ಟಿರುವ ಪೊಲೀಸ್ ಪೇದೆ ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿ ಹಾಸನಕ್ಕೆ ತೆರಳಿದ್ದರು ಎಂದು ಹೇಳಲಾಗುತ್ತಿದೆ. ಅಲ್ಲದೆ ಜಿಲ್ಲೆಯ ಪೊಲೀಸ್ ತರಬೇತಿ ಶಾಲೆಗೂ ಇವರು ಭೇಟಿ ನೀಡಿದ್ದು, ಇದೀಗ ನೂರಕ್ಕೂ ಹೆಚ್ಚು ಪೊಲೀಸರನ್ನು ಕ್ವಾರಂಟೈನ್ ನಲ್ಲಿರಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಈ ವಿಚಾರವಾಗಿ ಮಾಹಿತಿ ನೀಡಿರುವ ಜಿಲ್ಲಾಧಿಕಾರಿಗಳು ಎರಡು ಏರಿಯಾಗಳನ್ನು ಕಂಟೈನ್’ಮೆಂಟ್ ಝೋನ್ ಎಂದು ಘೋಷಣೆ ಮಾಡಿದ್ದಾರೆ. ಇಂದಿನಿಂದ 28 ದಿನಗಳ ಕಾಲ ಈ ರಸ್ತೆಗಳನ್ನು ಸೀಲ್’ಡೌನ್ ಮಾಡಲಾಗಿದೆ. ಅಗತ್ಯ ವಸ್ತುಗಳನ್ನು ಜಿಲ್ಲಾಡಳಿತವೇ ಪೂರೈಕೆ ಮಾಡಲಿದ್ದು, ಜನರು ಬಹಳ ಎಚ್ಚರದಿಂದ ಇರಬೇಕೆಂದು ಹೇಳಿದ್ದಾರೆ.

Comments are closed.