ಕರ್ನಾಟಕ

ಈ ತಿಂಗಳು ಪಡಿತರ ಚೀಟಿ ಇಲ್ಲದಿದ್ದರೂ ಆಹಾರ ಧಾನ್ಯ ವಿತರಣೆ; ಸಚಿವ ಗೋಪಾಲಯ್ಯ

Pinterest LinkedIn Tumblr


ಕೊಡಗು (ಮೇ 30); ದೇಶದಾದ್ಯಂತ ಕೊರೋನಾ ಲಾಕ್‌ಡೌನ್ ಚಾಲ್ತಿಯಲ್ಲಿದ್ದು ಪಡಿತರ ಚೀಟಿ ಇರುವ ಅಥವಾ ಇಲ್ಲದಿರುವ ಪ್ರತಿಯೊಬ್ಬರಿಗೂ ಪಡಿತರ ಧಾನ್ಯಗಳು ದೊರೆಯಲಿವೆ ಎಂದು ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.

ಮಡಿಕೇರಿಯಲ್ಲಿ ಮಾತನಾಡಿರುವ ಅವರು, “ಏಪ್ರಿಲ್ ತಿಂಗಳಲ್ಲಿ ರಾಜ್ಯದಲ್ಲಿ ಶೇ.95 ರಷ್ಟು ಆಹಾರ ಧಾನ್ಯ ವಿತರಣೆ ಮಾಡಲಾಗಿದೆ. ಜೂನ್ ತಿಂಗಳಲ್ಲಿ ಕಾರ್ಡ್ ಇಲ್ಲದಿರುವ ಕುಟುಂಬಗಳಿಗೂ ಆಹಾರ ಧಾನ್ಯ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಅದರಲ್ಲೂ ವಲಸೆ ಕಾರ್ಮಿಕರಿಗೆ ಮುಖ್ಯವಾಗಿ ಕೇಂದ್ರ ಮತ್ತು ರಾಜ್ಯದ ಪಾಲಿನ ಆಹಾರ ಧಾನ್ಯಗಳನ್ನು ವಿತರಿಸಲಾಗುವುದು” ಎಂದು ಅವರು ಮಾಹಿತಿ ನೀಡಿದ್ದಾರೆ.

“ಪ್ರತಿ ವ್ಯಕ್ತಿಗೆ 5 ಕೆ.ಜಿ ಅಕ್ಕಿ ಜೊತೆಗೆ 1 ಕೆ.ಜಿ. ಕಡಲೆ ಮತ್ತು 1 ಕೆ.ಜಿ ತೊಗರಿ ಬೇಳೆ ವಿತರಿಸಲಾಗುವುದು. ಇನ್ನು ರಾಜ್ಯದಲ್ಲಿ ಎಲ್ಲೇ ಕಳಪೆ ಗುಣಮಟ್ಟದ ಆಹಾರ ಧಾನ್ಯಗಳ ಪೂರೈಕೆ ಮಾಡಿದ್ದಲ್ಲಿ ಅಥವಾ ತೂಕದ ಪ್ರಮಾಣದಲ್ಲಿ ಕಡಿಮೆ ನೀಡಿದಲ್ಲಿ ಅಂತವರ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೆ, ಸಂಚಾರಿ ನ್ಯಾಯಬೆಲೆ ಅಂಗಡಿಗಳ ಮೂಲಕವೂ ಆಹಾರ ಧಾನ್ಯ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ” ಎಂದು ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.

Comments are closed.