ಕರ್ನಾಟಕ

ಇನ್ನೆರಡು ದಿನದಲ್ಲಿ ರಾಜ್ಯವ್ಯಾಪಿ ಮುಂಗಾರು!

Pinterest LinkedIn Tumblr


ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಸ್ವಲ್ಪ ಪ್ರಮಾಣದ ಮಳೆ ಸುರಿದಿದೆ. ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ, ಬೆಂಗಳೂರು ಭಾಗಗಳಲ್ಲಿ ಚದುರಿದಂತೆ ಕೆಲವೆಡೆ ಮಳೆಯಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಇನ್ನೂ ವ್ಯಾಪಕ ಮಳೆ ಆರಂಭವಾಗಿಲ್ಲ.

ಜೂ.13ರವರೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು ಮತ್ತು ಶಿವಮೊಗ್ಗದಲ್ಲಿ ಚದುರಿದಂತೆ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈರುತ್ಯ ಮಾನ್ಸೂನ್‌ ಮಾರುತಗಳು ಈಗಾಗಲೇ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ ಪ್ರವೇಶಿಸಿದೆ. ಎರಡರಿಂದ ಮೂರು ದಿನಗಳಲ್ಲಿ ರಾಯಲ ಸೀಮಾ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ನೈರುತ್ಯ ಬಂಗಾಳ ಕೊಲ್ಲಿಯನ್ನು ಪೂರ್ಣವಾಗಿ ಆವರಿಸಲಿದೆ. ಬಂಗಾಳ ಕೊಲ್ಲಿಯಲ್ಲಿ ಜೂನ್‌ 9ರಿಂದ ಮುಂದಿನ 48 ಗಂಟೆಗಳ ಕಾಲ ಕಡಿಮೆ ಒತ್ತಡ ಏರ್ಪಡಲಿದ್ದು, ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Comments are closed.