ಕರ್ನಾಟಕ

ಕ್ವಾರಂಟೈನ್​ನಲ್ಲಿದ್ದ ಮಹಿಳೆಗೆ ಆ್ಯಂಬುಲೆನ್ಸ್​ನಲ್ಲೇ ಹೆರಿಗೆ!

Pinterest LinkedIn Tumblr


ಕಲಬುರ್ಗಿ (ಜೂ 14): ಕ್ವಾರಂಟೈನ್ ಕೇಂದ್ರದಲ್ಲಿದ್ದ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಹೆರಿಗೆಯಾಗಿ, ಮಗು ಅಸುನೀಗಿದ ಹೃದಯ ವಿದ್ರಾವಕ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ಹೆರಿಗೆಗೆಂದು ಕರೆತರುತ್ತಿದ್ದ ವೇಳೆ ಮಾರ್ಗಮಧ್ಯದಲ್ಲಿಯೇ ಹೆರಿಗೆಯಾಗಿದ್ದು, ದುರಾದೃಷ್ಟವಶಾತ್ ಕಣ್ತೆರೆಯುವ ಮುನ್ನವೇ ಮಗು ಮೃತಪಟ್ಟಿದೆ.

ಮಹಾರಾಷ್ಟ್ರದಿಂದ ವಾಪಸ್ಸಾಗಿದ್ದ 35 ವರ್ಷದ ಮಹಿಳೆಯನ್ನು ಸೇಡಂ ಪಟ್ಟಣದ ಲಾಡ್ಜ್‌ವೊಂದರ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿತ್ತು. ಹೆರಿಗೆ ನೋವಿನಿಂದ ಸಂಕಟ ಪಡುತ್ತಿದ್ದ ಮಹಿಳೆಯನ್ನು ಮೊದಲು ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಕಲಬುರ್ಗಿಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ತಕ್ಷಣ ಮಹಿಳೆಯನ್ನು ಆ್ಯಂಬುಲೆನ್ಸ್‌ನಲ್ಲಿ ಕಲಬುರ್ಗಿಗೆ ಕರೆತರಲಾಗುತ್ತಿತ್ತು. ಸೇಡಂ‌ ಪಟ್ಟಣದಿಂದ ಬರುವ ಮಾರ್ಗ ಮಧ್ಯೆದಲ್ಲಿಯೇ ಮಹಿಳೆಗೆ ಹೆರಿಗೆಯಾಗಿದೆ.

Comments are closed.