ಕರ್ನಾಟಕ

ರಾಜ್ಯದಲ್ಲಿ ಇಂದು (ಸೋಮವಾರ) 213 ಕೊರೋನಾ ಪ್ರಕರಣಗಳು ಪತ್ತೆ, ಇಬ್ಬರ ಸಾವು!

Pinterest LinkedIn Tumblr


ಬೆಂಗಳೂರು (ಜೂನ್‌ 15); ರಾಜ್ಯ ಇಂದು ಒಂದೇ ದಿನ 213 ಜನರಲ್ಲಿ ಕೊರೋನಾ ಸೋಂಕು ಕಂಡುಬಂದಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7213ಕ್ಕೆ ಏರಿಕೆಯಾಗಿದೆ. ಅಲ್ಲದೆ, ಇಬ್ಬರು ಮೃತಪಟ್ಟಿದ್ದು ಸಾವಿನ ಸಂಖ್ಯೆಯೂ 88ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಇಂದಿನ Heath Bulletienನಲ್ಲಿ ತಿಳಿಸಿದೆ.

ಲಾಕ್‌ಡೌನ್‌ ಸಡಿಲಿಕೆ ಆರಂಭವಾದ ನಂತರ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಊಹೆಗೂ ಮೀರಿ ಏರಿಕೆಯಾಗುತ್ತಲೇ ಇದೆ. ಸರಾಸರಿಯಾಗಿ ಪ್ರತಿದಿನ ಇನ್ನೂರಕ್ಕೂ ಹೆಚ್ಚು ಜನ ಈ ಸೋಂಕಿಗೆ ತುತ್ತಾಗುತ್ತಿದ್ದಾರೆ. ದೇಶದಾದ್ಯಂತ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ಹಿಂತಿರುಗುತ್ತಿರುವುದೇ ಈ ಸೋಂಕು ಅಧಿಕವಾಗಲು ಪ್ರಮುಖ ಕಾರಣ ಎನ್ನಲಾಗುತ್ತಿದೆ.

ಇಂದೂ ಸಹ ಈ ಸಾಲಿನಲ್ಲಿ 213 ಹೊಸ ಪ್ರಕರಣಗಳು ಸೇರ್ಪಡೆಯಾಗಿದೆ. ಈ ಪೈಕಿ 23 ಜನ ವಲಸೆ ಕಾರ್ಮಿಕರು ಮತ್ತು ಪ್ರಯಾಣಿಕರು ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ಇಂದು 180 ಜನ ಗುಣಮುಖರಾಗಿ ಡಿಸ್ಜಾರ್ಜ್‌ ಆಗಿದ್ದಾರೆ. ಈ ಮೂಲಕ ಆಸ್ಪತ್ರೆಯಿಂದ ಡಿಸ್ಜಾರ್ಚ್‌ ಆದವರ ಸಂಖ್ಯೆಯೂ 4135ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ನೀಡುವ ಅಂಕಿಅಂಶಗಳ ಪ್ರಕಾರ ಕರ್ನಾಟಕದಲ್ಲಿ ಕೊರೋನಾ ಸೋಂಕಿನಿಂದ ಸಾಯುವವರ ಸಂಖ್ಯೆ ಕೇವಲ ಶೇ.1.8 ರಷ್ಟು ಮಾತ್ರ ಎನ್ನಲಾಗಿದೆ.

Comments are closed.