ಕರ್ನಾಟಕ

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ: ಯಡಿಯೂರಪ್ಪ

Pinterest LinkedIn Tumblr


ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ವಾರದಲ್ಲಿ ಎರಡು ದಿನಗಳ ಕಾಲ ಲಾಕ್‌ಡೌನ್ ಮಾಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಇಂತಹ ಯಾವುದೇ ಯೋಜನೆಯೂ ಸರ್ಕಾರದ ಮುಂದೆ ಇಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆಯಲಿರುವ ವಿಡಿಯೋ ಸಂವಾದಲ್ಲೂ ಈ ಮನವಿಯನ್ನು ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಲಾಕ್‌ಡೌನ್ ಸಡಿಲಿಕೆ ಮಾಡುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ಮತ್ತೆ ಜಾರಿಗೊಳಿಸಲಾಗುತ್ತದೆ ಎಂಬ ಹೇಳಲಾಗುತಿತ್ತು. ಆದರೆ ಬಿಎಸ್‌ವೈ ಈ ಊಹಾಪೋಹವನ್ನು ನಿರಾಕರಿಸಿದ್ದಾರೆ.

ಆದರೆ ಜನರು ಎಚ್ಚರಿಕೆಯಿಂದ ಇರಬೇಕು. ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡರು.

ರಾಜ್ಯದಲ್ಲಿ ಕೊರೊನಾ ಸೋಂಕು 7000 ಗಡಿ ದಾಟಿದೆ. ಕಳೆದ ಎರಡು ದಿನಗಳಲ್ಲಿ ಬೆಂಗಳೂರು ನಗರ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಮಹಾರಾಷ್ಟ್ರದಿಂದ ಬಂದವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಪತ್ತೆಯಾಗಿದೆ.

Comments are closed.