
ಧಾರವಾಡ: ಧಾರವಾಡ ಜಿಲ್ಲೆಯಲ್ಲಿ 8 ಜನ ಶಿಕ್ಷಕರಿಗೆ ಕೊರೋನಾ ಸೋಂಕು ತಗುಲಿದ್ದು ನರ್ಸ್ ಯಿಂದ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಸ್ಪಷ್ಟಪಡಿಸಿದ್ದಾರೆ.
ಧಾರವಾಡದ ಜಿಲ್ಲಾಡಳಿತ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಿಕ್ಷಕಿಯ ಪತಿ ಅವರು ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ( ಪುರುಷ ) ಪಿ- 7260 ಆಗಿ ಕೆಲಸ ಮಾಡುತ್ತಿದ್ದು, ಇವರಿಂದ ಪತ್ನಿಗೆ ಕೊರೋನಾ ಸೋಂಕು ತಗುಲಿದೆ. ಆದರೆ ನರ್ಸ್ಗೆ ಸೋಂಕು ತಗುಲಿದ ಬಗ್ಗೆ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ ಎಂದು ತಿಳಿಸಿದರು.
ಕೊರೋನಾ ಸೋಂಕಿತ ನರ್ಸ್ ಪತ್ನಿ ಪಿ – 5970 ಖಾಸಗಿ ಶಾಲೆಯ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಇವರು ಶಾಲೆಯಲ್ಲಿ ನಡೆದ ಸಭೆಯಲ್ಲಿ ಭಾಗಿಯಾಗಿ ಉಳಿದವರಿಗೆ ಪಿ – 6833, ಪಿ – 6834 ಪಿ – 6835 ಪಿ – 6836 ಪಿ – 6837 ಹಾಗೂ ಪಿ – 6841 ಪಿ – 6842 ಸೋಂಕು ಹರಡಿದೆ. ಈಗಾಗಲೇ ಸೋಂಕಿತರಿಗೆ ಹುಬ್ಬಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೂ ಉಳಿದ ಶಿಕ್ಷಕರ ಹಾಗೂ ಖಾಸಗಿ ಆಸ್ಪತ್ರೆಯ ಸಿಬ್ಬಂದಿಯ ಗಂಟಲು ದ್ರವ ಮಾದರಿಯನ್ನು ಪರಿಕ್ಷೆಗೆ ಕಳಿಸಲಾಗಿದೆ. ಅವರ ವರದಿ ಬರಬೇಕಿದೆ ಎಂದರು.
ಇನ್ನು ಲಾಕ್‌ಡೌನ್ ಸಡಿಲಿಕೆ ಬಳಿಕ ಸಾರ್ವಜನಿಕರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಶಾಲೆಯಲ್ಲಿ ಸಭೆ ಮಾಡುವ ಸಂದರ್ಭದಲ್ಲಿ ಶಿಕ್ಷಕರೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಿತ್ತು. ಸೋಂಕಿತ ಶಿಕ್ಷಕರ ಶಾಲೆ ಎಸ್.ಎಸ್.ಎಲ್.ಸಿ ಸೆಂಟರ್ ಮಾಡಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ.
Comments are closed.