ಕರ್ನಾಟಕ

ರಾಜ್ಯದಲ್ಲಿ ಇಂದು(ಬುಧವಾರ) ಕೊರೋನಾಗೆ 8 ಬಲಿ, 204 ಮಂದಿಗೆ ಸೋಂಕು

Pinterest LinkedIn Tumblr


ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 8 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 102ಕ್ಕೇರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಐವರು, ಶಿವಮೊಗ್ಗ, ಬಳ್ಳಾರಿ ಹಾಗೂ ಬೀದರ್ ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬೆಂಗಳೂರು ನಗರದ 70 ವರ್ಷದ ಮಹಿಳೆ, 39 ವರ್ಷದ ಮಹಿಳೆ, 64,61,90 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗದಲ್ಲಿ 56 ವರ್ಷದ ಮಹಿಳೆ, ಬೀದರ್ ನಲ್ಲಿ 26 ವರ್ಷದ ಮಹಿಳೆ, ಬಳ್ಳಾರಿಯಲ್ಲಿ 62 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.

ಇಂದು ಹೊಸದಾಗಿ 204 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7734ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, 4804 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ ಒಟ್ಟು 2824 ಸಕ್ರಿಯ ಪ್ರಕರಣಗಳಿವೆ.

204 ಪ್ರಕರಣಗಳ ಪೈಕಿ 106 ಮಂದಿ ಹೊರರಾಜ್ಯ ಮತ್ತು ಇಬ್ಬರು ಹೊರ ದೇಶದ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.

ಬೆಂಗಳೂರು ನಗರದಲ್ಲಿ 55, ಯಾದಗಿರಿಯಲ್ಲಿ 37, ಬಳ್ಳಾರಿಯಲ್ಲಿ 29, ಕಲಬುರಗಿಯಲ್ಲಿ 19, ಬೀದರ್ ನಲ್ಲಿ 12, ದಕ್ಷಿಣ ಕನ್ನಡ, ಧಾರವಾಡದಲ್ಲಿ 8, ಮಂಡ್ಯದಲ್ಲಿ 7, ಹಾಸನದಲ್ಲಿ 5, ಉಡುಪಿ, ಬಾಗಲಕೋಟೆ, ಶಿವಮೊಗ್ಗದಲ್ಲಿ ತಲಾ 4, ದಾವಣಗೆರೆ, ಚಿಕ್ಕಬಳ್ಳಾಪುರ, ಉತ್ತರಕನ್ನಡದಲ್ಲಿ ತಲಾ 3, ರಾಯಚೂರು, ಮೈಸೂರು, ಬೆಂಗಳೂರು ಗ್ರಾಮಾಂತರದಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ.

Comments are closed.